
ಬೆಂಗಳೂರು: ಜೆಡಿಎಸ್ ನಾಯಕ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗ್ಗೆ ಅಮಿತ್ ಷಾ ಸಮ್ಮುಖದಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು.
ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೂ ಪಕ್ಷದ ಅಭ್ಯರ್ಥಿ ಘೋಷಣೆ ಮಾಡಿರಲಿಲ್ಲ. ಹೊರಟ್ಟಿ ಅವರು ಜೆಡಿಎಸ್ ತೊರೆದು ಪಕ್ಷಕ್ಕೆ ಬಂದ ಮೇಲೆ ಅವರಿಗೆ ಪಕ್ಷದ ಟಿಕೆಟ್ ನೀಡುವ ಕುರಿತು ಮೊದಲೇ ನಿರ್ಧಾರವಾಗಿತ್ತು.
ಹೊರಟ್ಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುವ ಸಂದರ್ಭ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ , ಆರ್ ಅಶೋಕ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮೊದಲಾದವರು ಉಪಸ್ಥಿತರಿದ್ದರು.