
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 9ನೇ ಪಟ್ಟಿ ಬಿಡುಗಡೆ ಮಾಡಿದ್ದು ಕರ್ನಾಟಕದ 3 ಸ್ಥಾನಗಳಿಗೆ ರಕ್ಷಾ ರಾಮಯ್ಯ, ಇ.ತುಕಾರಾಂ, ಸುನೀಲ್ ಬೋಸ್ ಗೆ ಟಿಕೆಟ್ ನೀಡಲಾಗಿದೆ. ರಾಜ್ಯದಲ್ಲಿ 24 ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಇದೀಗ ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಚಾಮರಾಜನಗರ ಕ್ಷೇತ್ರದಲ್ಲಿ ಸಚಿವ ಎಚ್.ಸಿ. ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಹಾಗೂ ಬಳ್ಳಾರಿಯಲ್ಲಿ ಸಂಡೂರು ಹಾಲಿ ಶಾಸಕ ಇ.ತುಕಾರಾಂ ಅವರಿಗೆ ಟಿಕೆಟ್ ನೀಡಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ ವೀರಪ್ಪ ಮೊಯಿಲಿ ಟಿಕೆಟ್ ಗಾಗಿ ಭಾರೀ ಒತ್ತಡ ಹೇರಿದ್ದರು. ಇದು ನನ್ನ ಕೊನೆ ಚುನಾವಣೆ ಎನ್ನುತ್ತಾ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿ ಟಿಕೆಟ್ ಕೇಳಿದ್ದರು. ಆದರೆ ಇಲ್ಲಿ ಮಾಜಿ ಸಚಿವ ಎಂ.ಆರ್.ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯಗೆ ಟಿಕೆಟ್ ನೀಡಲಾಗಿದೆ. ಚಾಮರಾಜನಗರದಲ್ಲಿ ಪುತ್ರ ಸುನೀಲ್ ಬೋಸ್‌ಗೆ ಟಿಕೆಟ್ ಕೊಡಿಸುವಲ್ಲಿ ಸಚಿವ ಎಚ್.ಸಿ ಮಹದೇವಪ್ಪ ಯಶಸ್ವಿಯಾಗಿದ್ದಾರೆ.
ನಮ್ಮ ವಾಟ್ಸಾಪ್ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
https://chat.whatsapp.com/CMUDdTXoFVn7atm3zHYGrd