
ಮಂಗಳೂರು: ಬಿಜೆಪಿ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ರಾಜ್ಯದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡದಲ್ಲಿ 3 ಬಾರಿಯ ಸಂಸದ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಬಿಜೆಪಿ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟರವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಉಡುಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದ್ದು ಶೋಭಾ ಕರಂದ್ಲಾಜೆ ಅವರಿಗೆ ಯಾವ ಕ್ಷೇತ್ರ ಎಂದು ಇನ್ನೂ ನಿಗದಿಪಡಿಸಿಲ್ಲ. ಮೈಸೂರಿನಿಂದ ಸಂಸತ್ ಪಾಸ್ ಪ್ರಕರಣದಲ್ಲಿ ಪ್ರತಾಪ್ ಸಿಂಹ ತಲೆದಂಡವಾಗಿದ್ದು ರಾಜಮನೆತನದ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದೆ.
ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ, ಚಾಮರಾಜನಗರದಲ್ಲಿ ಬಾಲರಾಜ್, ತುಮಕೂರಿನಿಂದ ವಿ ಸೋಮಣ್ಣ, ಧಾರವಾಡದಿಂದ ಪ್ರಹ್ಲಾದ್ ಜೋಶಿ, ಬೀದರಿನಿಂದ ಭಗವಂತ್ ಖೂಬಾ, ಬೆಂಗಳೂರು ಗ್ರಾಮಾಂತರದಿಂದ ವೈದ್ಯ ಡಾ. ಮಂಜುನಾಥ್, ಬಳ್ಳಾರಿಯಿಂದ ಶ್ರೀ ರಾಮುಲು, ಕೊಪ್ಪಳದಿಂದ ಬಸವರಾಜ್, ಬೆಂಗಳೂರು ದಕ್ಷಿಣದಿಂದ ತೇಜಸ್ವೀ ಸೂರ್ಯ, ಚಿಕ್ಕೋಡಿಯಿಂದ ಅಣ್ಣಾಸಾಹೇಬ್ ಜೊಲ್ಲೆ, ಬೆಂಗಳೂರು ಸೆಂಟ್ರಲ್ ನಿಂದ ಪಿಸಿ ಮೋಹನ್, ಬಾಗಲಕೋಟೆಯಿಂದ ಗದ್ದಿಗೌಡರ, ಕಲಬುರ್ಗಿಯಿಂದ ಉಮೇಶ್ ಜಾಧವ್ ಅವರಿಗೆ ಟಿಕೆಟ್ ನೀಡಲಾಗಿದೆ.