Karnataka

ಸರ್ಕಾರಿ ಅಧಿಕಾರಿ ಮನೆಗಳಿಗೆ ಲೋಕಾಯುಕ್ತ ಧಾಳಿ​​​: ಚಿನ್ನಾಭರಣ, ಕಂತೆ ಕಂತೆ ನೋಟು ಪತ್ತೆ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಶಾಕ್​ ನೀಡಿದ್ದಾರೆ. ರಾಜ್ಯದ ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ಒಟ್ಟು 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್​ ಆಗಿರುವ ಸತೀಶ್​ ಬಾಬು ಅವರ ಚಿತ್ರದುರ್ಗ ಮತ್ತು ಬೆಂಗಳೂರು ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸತೀಶ್​ ಬಾಬು ಅವರ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.

ಭ್ರಷ್ಟಾಚಾರ ಆರೋಪದ ಹಿನ್ನೆಲೆ ಬೆಂಗಳೂರು ದಕ್ಷಿಣ ತಾಲೂಕಿನ‌ ಚೆನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಮನೆ ಮೇಲೆ ಲೋಕಾಯುಕ್ತ ಡಿವೈಎಸ್​ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾಸಲುಪುರ ಗ್ರಾಮದಲ್ಲಿರುವ ಟೌನ್ ಅಂಡ್‌ ರೂರಲ್ ಪ್ಲ್ಯಾನಿಂಗ್ ಜಂಟಿ ನಿರ್ದೇಶಕ‌ ಮಂಜೇಶ್ ಅವರ ಮಂಜೇಶ್ ಫಾರ್ಮ್​ಹೌಸ್ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಮಂಜೇಶ್ ಆನೇಕಲ್​ನಲ್ಲಿ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸ್ತಿದ್ದಾರೆ. ಮಂಜೇಶ್ ಅವರಿ​ಗೆ ಸೇರಿದ ‌9 ಕಡೆ ರಾಮನಗರ ಲೋಕಾಯುಕ್ತ ಇನ್ಸ್​ಪೆಕ್ಟರ್ ಲಕ್ಷ್ಮಣ್ ನೇತೃತ್ವದಲ್ಲಿ ದಾಳಿ ನಡೆದಿದೆ.

Exit mobile version