
ಮಂಡ್ಯ: ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಮಂಡ್ಯದ ಕೆರೆಗೋಡು ಗ್ರಾಮದ ಹನುಮ ಧ್ವಜ ತೆರವು ವಿವಾದ ಸದ್ಯಕ್ಕೆ ತಣ್ಣಗಾಗಿದ್ದು ವಿವಾದ ಸಂಬಂಧ ಜಿಲ್ಲಾಧಿಕಾರಿಗಳು ಹಾಗು ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್’ನ್ನು ವಾಪಸು ಪಡೆಯಲಾಗಿದೆ.
ಕೆರಗೋಡು ಹನುಮ ಧ್ವಜ ತೆರವು ವಿರೋಧಿಸಿ ಫೆ.9ಕ್ಕೆ ಮಂಡ್ಯ ಭಜರಂಗದಳ ಬಂದ್ ಗೆ ಕರೆ ಕೊಟ್ಟಿದೆ. ಭಜರಂಗದಳ ಬಂದ್ ಕರೆ ವಿರೋಧಿಸಿ ಫೆ.7 ಕ್ಕೆ ಅಂದರೆ ನಾಳೆ ಸಮಾನ ಮನಸ್ಕರ ವೇದಿಕೆ ಬಂದ್ಗೆ ಕರೆ ಕೊಟ್ಟಿತ್ತು. ಇವರಿಗೆ ದಲಿತ ಪರ ಸಂಘಟನೆ, ಪ್ರಗತಿಪರರು, ಸಿಐಟಿಯು ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿದ್ದರು. ಆದರೆ, ಇದೀಗ ಜಿಲ್ಲಾಡಳಿತ ಮನವಿ ಮೇರೆಗೆ ಸಮಾನ ಮನಸ್ಕರ ವೇದಿಕೆ ಬಂದ್ ಅನ್ನು ವಾಪಸು ಪಡೆದಿದೆ.
ಮಂಡ್ಯ ಡಿಸಿ ಡಾ.ಕುಮಾರ್, ಎಸ್ಪಿ ಎನ್.ಯತೀಶ್ ನೇತೃತ್ವದಲ್ಲಿ ಸಭೆ ನಡೆಡಿದ್ದು ಬಂದ್ ನಡೆಸದಂತೆ ಮನವಿ ಮಾಡಲಾಗಿದೆ. ಬಂದ್ ನಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗು ಜನ ಸಾಮಾನ್ಯರಿಗೆ ತೊಂದರೆಯಾಗುತ್ತೆ. ಹೀಗಾಗಿ ಸಂಘಟನೆಗಳು ಬಂದ್ ಹಿಂಪಡೆಯಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಇದಕ್ಕೆ ಸಮಾನ ಮನಸ್ಕರ ವೇದಿಕೆ ಸ್ಪಂದಿಸಿ ಬಂದ್ ಹಿಂಪಡೆದಿದೆ.
ನಾವು ಫೆ.7ರಂದು ಕರೆಕೊಟ್ಟಿದ್ದ ಬಂದ್ ಅನ್ನು ವಾಪಸು ಪಡೆಡಿದ್ದೇವೆ. ಹಾಗೆಯೇ ಫೆ.9 ರಂದು ಭಜರಂಗ ದಳ ಕರೆ ಕೊಟ್ಟಿರುವ ಮಂಡ್ಯ ನಗರ ಬಂದ್ಗೂ ಅವಕಾಶ ಕೊಡಬೇಡಿ. ಫೆ.9 ರಂದು ಮಂಡ್ಯ ನಗರವನ್ನ ಭಜರಂಗದಳ ಬಂದ್ ಮಾಡಿದರೆ, ಅದನ್ನ ವಿರೋಧಿಸಿ ಮತ್ತೆ ಬಂದ್ ಗೆ ಕರೆಕೊಡುತ್ತೇವೆ ಎಂದು ಸಮಾನ ಮನಸ್ಕರ ವೇದಿಕೆ ಎಚ್ಚರಿಕೆ ನೀಡಿದೆ.












































