HomeKarnatakaಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿಗೆ ಕಿಸ್ ಮಾಡಿದ ಹೆಡ್ ಮಾಸ್ಟರ್ ವಜಾ

ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿಗೆ ಕಿಸ್ ಮಾಡಿದ ಹೆಡ್ ಮಾಸ್ಟರ್ ವಜಾ

ಮೈಸೂರು: ಮೈಸೂರಿನ ಕೋಟೆ ಪಟ್ಟಣದ ಶಾಲೆಯಲ್ಲಿ ತನ್ನ ಕಚೇರಿಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಕಿಸ್ ಮಾಡಿದ ಮುಖ್ಯೋಪಾಧ್ಯಾಯನನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಹೆಡ್ ಮಾಸ್ಟರ್ ಆರ್.ಎಂ. ಅನಿಲ್‌ಕುಮಾರ್ ಅವರು ತಮ್ಮ ಚೇಂಬರಿನಲ್ಲಿಯೇ ವಿದ್ಯಾರ್ಥಿನಿ ಒಬ್ಬಳಿಗೆ ಮುತ್ತು ನೀಡುವಾಗ ಸಿಕ್ಕಿಬಿದ್ದಿದ್ದಾರೆ. ಕೂಡಲೇ ತುರ್ತು ಸಭೆ ಕರೆದ ಖಾಸಗಿ ಶಾಲೆಯ ಆಡಳಿತ ಮಂಡಳಿ ಮುಖ್ಯೋಪಾಧ್ಯಾಯನನ್ನು ಸೇವೆಯಿಂದ ವಜಾಗೊಳಿಸಲು ತೀರ್ಮಾನಿಸಿದೆ.

ಅನಿಲ್ ಕುಮಾರ್ ತನ್ನ ಚೇಂಬರ್‌ನಲ್ಲಿ ವಿದ್ಯಾರ್ಥಿನಿಯನ್ನು ಹಿಡಿದುಕೊಂಡು ಚುಂಬಿಸುತ್ತಿರುವ ದೃಶ್ಯವನ್ನು ವಿದ್ಯಾರ್ಥಿಗಳು ಕಿಟಕಿ ಮೂಲಕ ಚಿತ್ರೀಕರಿಸಿದ್ದರು. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಘಟನೆ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ಅರಸ್ ಕೂಡ ಆರೋಪಿ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments