Karnataka

ಭೀಕರ ಅಪಘಾತಕ್ಕೆ ನಜ್ಜುಗುಜ್ಜಾದ ಕಾರು: ಒಂದು ತಿಂಗಳ ನವದಂಪತಿ ದುರ್ಮರಣ

ತುಮಕೂರು: ಇಲ್ಲಿನ ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರ್ ಗೇಟ್ ಬಳಿ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮದುವೆಯಾಗಿ ಒಂದುವರೆ ತಿಂಗಳಾಗಿದ್ದ ನವದಂಪತಿಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಬಳ್ಳಾರಿ ಕಡೆಗೆ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿಗಳ ಹುಂಡೈ ಕ್ರೇಟಾ ಕಾರು ಲಾರಿಯೊಂದಿಗೆ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕ್ರೇಟಾ ಕಾರು ಸಂಪೂರ್ಣ ಛಿದ್ರ ಛಿದ್ರವಾಗಿದೆ. ಮೃತರಾದ ನವದಂಪತಿಗಳು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಟೆಕ್ಕಿಗಳಾಗಿದ್ದರು. ಮೃತರನ್ನು ಅರಸಿಕೆರೆ ಮೂಲದ 35 ವರ್ಷದ ರಘು ಮತ್ತು ತಿಗಳನಹಳ್ಳಿ ಮೂಲದ 28 ವರ್ಷದ ಅನುಷಾ ಎಂದು ಗುರುತಿಸಲಾಗಿದೆ.

ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

Exit mobile version