HomeKarnatakaಜಿಹಾದಿ ಉಗ್ರ ಸಂಘಟನೆ ಭೇಧಿಸಿದ ಎನ್ ಐಎ: ಬೆಂಗಳೂರು ಸೇರಿ ದಕ್ಷಿಣ ಭಾರತದ 19 ಕಡೆ...

ಜಿಹಾದಿ ಉಗ್ರ ಸಂಘಟನೆ ಭೇಧಿಸಿದ ಎನ್ ಐಎ: ಬೆಂಗಳೂರು ಸೇರಿ ದಕ್ಷಿಣ ಭಾರತದ 19 ಕಡೆ ದಾಳಿ

ಬೆಂಗಳೂರು: ಕಳೆದ ವಾರ ಉಗ್ರರನ್ನು ಸದೆಬಡಿಯುವ ಕಾರ್ಯಾಚರಣೆ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳು ಇಂದು ಸೋಮವಾರ ಮತ್ತೆ ದಾಳಿ ನಡೆಸಿದ್ದಾರೆ. ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್​.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ನಗರದ 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ಡಿಸೆಂಬರ್ 9 ರಂದು ಉಗ್ರ ಸಂಘಟನೆ ಐಸಿಸ್ ಜೊತೆ ಸಂಪರ್ಕ ಇದೆ ಎಂಬ ಶಂಕೆಯ ಮೇರೆಗೆ ಹಿನ್ನೆಲೆ ಪುಲಿಕೇಶಿನಗರದಲ್ಲಿರುವ ಮೋರ್ ರಸ್ತೆಯ ಅಲಿ ಅಬ್ಬಾಸ್ ಫ್ಲಾಟ್ ಮೇಲೆ ದಾಳಿ ನಡೆಸಿದ್ದ ಎನ್​ಐಎ, 16 ಲಕ್ಷಕ್ಕೂ ಹೆಚ್ಚು ನಗದು ಹಾಗೂ ಲ್ಯಾಪ್ ಟಾಪ್, ಪೆನ್ ಡ್ರೈವ್ ಜಪ್ತಿ ಮಾಡಿದ್ದರು. ಅದರಂತೆ ಅಲಿ ಅಬ್ಬಾಸ್ ಮೊಬೈಲ್, ಲ್ಯಾಪ್ ಟಾಪ್ ರಿಟ್ರೀವ್ ಮಾಡಲಾಗಿತ್ತು. ಈ ವೇಳೆ ಮಹತ್ವದ ಮಾಹಿತಿ ಕಲೆ ಹಾಕಿದ್ದ ಎನ್​ಐಎ ಅಧಿಕಾರಿಗಳು, ಇಂದು ಮತ್ತೆ ನಗರದ ಹಲವೆಡೆ ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದ 44 ಕಡೆಗಳಲ್ಲಿ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಐಸಿಸ್​ನೊಂದಿಗೆ ಸಂಪರ್ಕದಲ್ಲಿದ್ದ 15 ಶಂಕಿತ ಉಗ್ರರನ್ನು ಬಂಧಿಸಿ, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಂಡಿದ್ದರು. ಅದರಲ್ಲಿ ಐಎಸ್‌ (ಇಸ್ಲಾಮಿಕ್ ಸ್ಟೇಟ್) ಸಂಘಟನೆ ಜೊತೆ ನಂಟು ಹೊಂದಿ ಯುವಕರನ್ನು ಪ್ರಚೋದಿಸುತ್ತಿದ್ದ ಆರೋಪದಡಿ ಮುಂಬೈ ಮೂಲದ ಶಂಕಿತ ಉಗ್ರ ಅಲಿ ಅಬ್ಬಾಸ್ ಮನೆ ಮೇಲೆ ಎನ್‌ಐಎ ದಾಳಿ ನಡೆಸಿ ಬಂಧಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments