
ಕೊಣಾಜೆ : ಉಗ್ರರೊಂದಿಗೆ ಸಂಪರ್ಕ ಹೊಂದಿದ ಕಾರಣಕ್ಕಾಗಿ ಮಂಗಳೂರಿನ ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ ಏಳು ಮಂದಿಯ ಎನ್‌ಐಎ ತಂಡ ಓರ್ವ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಬಂಧಿತ ಇಂಜಿನಿಯರಿಂಗ್ ವಿದ್ಯಾರ್ಥಿ ಶಿವಮೊಗ್ಗದಿಂದ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಜತೆಗೆ ಸತತ ಸಂಪರ್ಕ ಹೊಂದಿದ್ದ ಎಂದು ದೃಢಪಟ್ಟಿದೆ.
ಪಿಎ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಉಡುಪಿ ಮೂಲದ ರಿಹಾನ್ ಶೇಖ್ ಎಂಬಾತನೇ ಉಗ್ರರೊಂದಿಗೆ ಸಂಪರ್ಕ ಹೊಂದಿದುದಕ್ಕಾಗಿ ಬಂಧಿತನಾದವ. ಈತನಿಗೆ ಎನ್‌ಐಎ ಅಧಿಕಾರಿಗಳು ಡ್ರಿಲ್ ಮಾಡುತ್ತಿದ್ದು ಹೆಚ್ಚಿನ ಮಾಹಿತಿ ಕಕ್ಕಿಸುತ್ತಿದ್ದಾರೆ.
ಐಸಿಸ್ ಉಗ್ರ ಸಂಘಟನೆ ಜತೆಗೆ ಸಂಪರ್ಕ ಹೊಂದಿದ್ದ, ಶಿವಮೊಗ್ಗದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕವಾಗಿ ಸ್ಪೋಟಕವನ್ನು ಸ್ಪೋಟಿಸುತ್ತಿದ್ದ ಪ್ರಕರಣದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಎಂಬಾತನ ಜೊತೆಗೆ ನಿರಂತರ ಸಂಪರ್ಕ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಜತೆಯಾಗಿ ಭಾಗಿಯಾಗಿದ್ದರೆಂಬ ವಿಚಾರದಲ್ಲಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನಲ್ಲಿ ಕುಕ್ಕರ್ ನಲ್ಲಿ ಸ್ಪೋಟಕ ಇಟ್ಟು ಬ್ಲಾಸ್ಟ್ ಮಾಡಿದ ಉಗ್ರಗಾಮಿ ಶಾರಿಕ್ ಕೂಡ ಈ ಮುನೀರ್ ಜತೆಗಿದ್ದವನಾಗಿದ್ದಾನೆ.
ಶಿವಮೊಗ್ಗ ಪ್ರಕರಣದಲ್ಲಿ ಸೈಯದ್ ಯಾಸೀನ್, ಮಾಝ್ ಮುನೀರ್ ನನ್ನ ಬಂಧಿಸಲಾಗಿತ್ತು. ತಲೆ ಮರೆಸಿಕೊಂಡಿದ್ದ ಶಾರೀಕ್ ಅಹಮ್ಮದ್ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದಲ್ಲಿ ತಾನಾಗಿಯೇ ಪೊಲೀಸ್ ಬಲೆಗೆ ಬಿದ್ದಿದ್ದ.
ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL













































