
ಬೆಂಗಳೂರು: ಇಸ್ಲಾಂ ಭಯೋತ್ಪಾದಕ ಸಂಘಟನೆ ಐಸಿಸ್ ಜತೆಗಿನ ಲಿಂಕ್ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ರಾಜ್ಯದ ಭಟ್ಕಳ, ತುಮಕೂರು ಸೇರಿದಂತೆ 5 ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ಧಾಳಿ ಮಾಡಿ ಶೋಧ ಕಾರ್ಯಾಚರಣೆ ನಡೆಸಿದೆ.
ಕರ್ನಾಟಕದ ಭಟ್ಕಳ, ತುಮಕೂರು, ಭೋಪಾಲ್, ರೈಸನ್ (ಮಧ್ಯಪ್ರದೇಶ), ಗುಜರಾತ್ ನ ಭರೂಚ್, ಸೂರತ್, ನವಸಾರಿ ಮತ್ತು ಅಹಮದಾಬಾದ್, ಬಿಹಾರದ ಅರಾರಿಯಾ, ಮಹಾರಾಷ್ಟ್ರದ ಕೊಲ್ಹಾಪುರ, ನಾಂದೇಡ್ ಜಿಲ್ಲೆಗಳು, ಉತ್ತರ ಪ್ರದೇಶದ ದೇವಬಂದ್ ಜಿಲ್ಲೆಗಳಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಸಿರಿಯಾ (ISIS) ಶಂಕಿತರಿಗೆ ಸಂಬಂಧಿಸಿದಂತೆ ರದಾಳಿ ನಡೆದಿದೆ.
ಭಟ್ಕಳದಲ್ಲಿ ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ 30 ವರ್ಷದ ಅಬ್ದುಲ್ ಮುಕ್ತದೀರ್ ಹಾಗೂ ಆತನ ಸಹೋದರನನ್ನು ಎನ್ಐಎ ವಶಕ್ಕೆ ಪಡೆದಿದ್ದು, ತುಮಕೂರಿನಲ್ಲಿ ರಂಗಸ್ವಾಮಿ ಎಂಬುವವರ ಮನೆಯಲ್ಲಿ ಬಾಡಿಗೆಗೆ ಇದ್ದ ಸಾಜಿದ್ ಮಕ್ರಾನಿ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.