HomeKarnatakaಶಾಲಾ ವಾಹನ ಚಾಲಕರು, ಸಹಾಯಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ಕಡ್ಡಾಯ

ಶಾಲಾ ವಾಹನ ಚಾಲಕರು, ಸಹಾಯಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ಕಡ್ಡಾಯ

ಬೆಂಗಳೂರು: ಶಾಲಾ ಮಕ್ಕಳನ್ನು ಕರೆತರುವ ಎಲ್ಲಾ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರ ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ ಮತ್ತು ಅದನ್ನು ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ಸಿಸ್ಟಂ (ಎಸ್‌ಟಿಎಸ್) ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಸುತ್ತೋಲೆ ಹೊರಡಿಸಿದೆ. 

ಶಾಲಾ ವಾಹನಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಹಿನ್ನೆಲೆಯಲ್ಲಿ ಪೊಲೀಸರಿಂದ ಪ್ರಮಾಣಪತ್ರಗಳನ್ನು ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದ್ದು, ಕೂಡಲೇ ಪ್ರಮಾಣಪತ್ರ ಹೊಂದುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಇಲಾಖೆಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಪ್ರತಿ ಎರಡು ವರ್ಷಗಳಿಗೊಮ್ಮೆ ಈ ಪ್ರಮಾಣಪತ್ರಗಳನ್ನು ನವೀಕರಿಸಬೇಕಾಗುತ್ತದೆ. ಜತೆಗೆ ಶಾಲಾ ವಾಹನಗಳಿಗೆ ಮಹಿಳಾ ಸಹಾಯಕಿಯರನ್ನೇ ನೇಮಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments