
ಮಂಗಳೂರು: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಕಡಲನಗರಿ ಮಂಗಳೂರಿಗೆ ಬರಲಿದ್ದು ಸೆಪ್ಟೆಂಬರ್ 2ರಂದು ಸಾಗರಮಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ನವಮಂಗಳೂರು ಬಂದರಿನಲ್ಲಿ ಸಾಗರಮಾಲ ಯೋಜನೆಯ ಚಲನ ಕಾರ್ಯಕ್ರಮ ನಡೆಯಲಿದೆ.
ಸಾಗರಮಾಲಾ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಅವರುಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪಕ್ಷದ ಸಾರ್ವಜನಿಕ ಸಮಾವೇಶದಲ್ಲಿ ಪಕ್ಷದ ಕಾರ್ಯಕರ್ತರನ್ನು ಹಾಗು ಅಭಿಮಾನಿಗಳನ್ನು ಉದ್ಧೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿ ಆಗಮನದ ಸುದ್ದಿ ತಿಳಿಯುತ್ತಿದ್ದಂತೆ ಸಮಾವೇಶಕ್ಕೆ ಜಿಲ್ಲಾ ಬಿಜೆಪಿ ಘಟಕ ಅದ್ಧೂರಿ ಸಿದ್ಧತೆ ಮಾಡಿಕೊಳ್ಳಲು ತಯಾರಿ ಮಾಡಿಕೊಂಡಿದೆ.