Karnataka

ಶಿವಮೊಗ್ಗ ಭಜರಂಗಿ ಹರ್ಷ ಕೊಲೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ 10 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆಗಾಗಿ 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಬೇಕೆಂಬ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಮನವಿ ಮಾಡಿಕೊಂಡಿತ್ತು.

ರಾಷ್ಟ್ರೀಯ ತನಿಖಾ ದಳದ ಮನವಿಯನ್ನು ವಿಶೇಷ ನ್ಯಾಯಾಲಯವು ಬುಧವಾರ ಪುರಸ್ಕರಿಸಿದೆ. ಹಾಗಾಗಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಲಾಗಿದೆ. ಎನ್‌ಐಎ ವಿಶೇಷ ನ್ಯಾಯಾಲಯದ ಉಸ್ತುವಾರಿ ನ್ಯಾಯಾಧೀಶ ಕಸನಪ್ಪ ನಾಯಕ್‌ ವಿಚಾರಣೆ ನಡೆಸಿ ಮನವಿಯನ್ನು ಪುರಸ್ಕರಿಸಿದ್ದಾರೆ.

ರಾಷ್ಟ್ರೀಯ ತನಿಖಾ ದಳದ ಪರ ಮನವಿ ಮಂಡಿಸಿದ ವಕೀಲರು, ಗುರುತು ಪತ್ತೆಯ ಪೆರೇಡ್‌ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಪ್ರತ್ಯಕ್ಷ ಸಾಕ್ಷಿಗಳ ವಿಚಾರಣೆ ಬಾಕಿಯಿದೆ. ಆರೋಪಿಗಳು ಬಳಸುತ್ತಿದ್ದ ವಿದ್ಯುನ್ಮಾನ ಸಾಧನಗಳು ಮತ್ತು ಸಿಡಿಆರ್ ವಿಶ್ಲೇಷಣೆ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಇನ್ನೂ ನಡೆಯಬೇಕಿದೆ. ಆದ್ದರಿಂದ ತನಿಖೆಗಾಗಿ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಅಗತ್ಯವಿದೆ ಎಂದು ಹೇಳಿದರು.

Exit mobile version