Karnataka

ಶಿವಮೊಗ್ಗದಲ್ಲಿ ಮತ್ತೆ ಹರಿದ ನೆತ್ತರು: ಹಿಂದೂ ಕಾರ್ಯಕರ್ತನ ಹತ್ಯೆ

ಶಿವಮೊಗ್ಗ: ಇತ್ತೀಚೆಗಷ್ಟೇ ಡಬಲ್ ಮರ್ಡರ್ ಇಂದಾಗಿ ಸುದ್ದಿಯಾಗಿದ್ದ ಶಿವಮೊಗ್ಗ ಮತ್ತೆ ಇಂದು ಕೊಲೆಯ ಕಾರಣಕ್ಕೆ ಸುದ್ದಿಯಾಗಿದೆ. ಭಾನುವಾರ ರಾತ್ರಿ ಸುಮಾರು 9 ಗಂಟೆಯ ಸುಮಾರಿಗೆ ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ಹಿಂದೂ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

26 ವರ್ಷದ ಹಿಂದೂ ಕಾರ್ಯಕರ್ತ ಹರ್ಷ ಎಂಬಾತನನ್ನು ಶಿವಮೊಗ್ಗದ ಸೀಗೆಹಟ್ಟಿಯ ದೊಡ್ಡಪೇಟೆ ಪೊಲೀಸ್ ಠಾಣೆ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತನ ಶರೀರವನ್ನು ಇಡಲಾಗಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ಇದೆ. ಸ್ಥಳದಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.

Exit mobile version