HomeKarnatakaಶಿವಮೊಗ್ಗ: ಸಾವರ್ಕರ್ ಕಾರ್ಯಕ್ರಮಕ್ಕೆ ಹೋಗಿದ್ದವನ ಮೇಲೆ ಮುಸ್ಲಿಂ ದುಷ್ಕರ್ಮಿಗಳಿಂದ ಹಲ್ಲೆ, ಬಿಗಿ ಬಂದೋಬಸ್ತ್

ಶಿವಮೊಗ್ಗ: ಸಾವರ್ಕರ್ ಕಾರ್ಯಕ್ರಮಕ್ಕೆ ಹೋಗಿದ್ದವನ ಮೇಲೆ ಮುಸ್ಲಿಂ ದುಷ್ಕರ್ಮಿಗಳಿಂದ ಹಲ್ಲೆ, ಬಿಗಿ ಬಂದೋಬಸ್ತ್

ಶಿವಮೊಗ್ಗ: ಸಾವರ್ಕರ್ ಕಾರ್ಯಕ್ರಮಕ್ಕೆ ಹೋಗಿದ್ದ ಹಿಂದೂ ವ್ಯಕ್ತಿ ಮೇಲೆ ದಾಳಿ ನಡೆಸಿದ ಮೂವರು ಮುಸ್ಲಿಂ ದುಷ್ಕರ್ಮಿಗಳು ಆರ್ ಎಸ್ಎಸ್ ವಿರೋಧಿ ಘೋಷಣೆ ಕೂಗಿದ್ದಾರೆ. ಈ ಮೂಲಕ ಶಿವಮೊಗ್ಗದಲ್ಲಿ ಕೋಮು ಸೌಹಾರ್ದತೆ ಮತ್ತೆ ಪರಿಸ್ಥಿತಿ ಹದಗೆಡುವ ಲಕ್ಷಣಗಳು ಗೋಚರಿಸಿದ್ದು ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತು ಮಾಡಲಾಗಿದೆ.

ಈ ಘಟನೆಯಿಂದ ಎಚ್ಚೆತ್ತಿರುವ ಶಿವಮೊಗ್ಗ ಪೊಲೀಸರು, ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಇದೇ ವರ್ಷ ಫೆಬ್ರವರಿಯಲ್ಲಿ ಶಿವಮೊಗ್ಗದಲ್ಲಿ ಹಿಂದು ಕಾರ್ಯಕರ್ತ ಹರ್ಷನ ಹತ್ಯೆಯಾಗಿತ್ತು. ಆ ಬಳಿಕ ನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿತ್ತು. ಆ ಬಳಿಕ ಸ್ವಾತಂತ್ರ ದಿನದಂದು ಸಾವರ್ಕರ್ ಫ್ಲೆಕ್ಸ್ ಹರಿದು ಮುಸ್ಲಿಂ ಮತಾಂಧರ ಗುಂಪು ಧಾಂಧಲೆ ಎಬ್ಬಿಸಿತ್ತು ಮತ್ತು ಇಬ್ಬರು ಹಿಂದೂಗಳ ಕೊಲೆ ಯತ್ನ ನಡೆಸಿತ್ತು.

ಈಗ ಹಲ್ಲೆಗೆ ಒಳಗಾದ ವ್ಯಕ್ತಿ ಪ್ರಕಾಶ್ ತಮ್ಮ ಮೇಲೆ ದಾಳಿ ಮಾಡಿದವರು ಸ್ಥಳೀಯರಲ್ಲ ಎಂದು ಹೇಳಿದ್ದು ತಾವು ಸಾವರ್ಕರ್ ಅವರಿಗೆ ಸಂಬಂಧಿಸಿದ ಕಾರ್ಯಕ್ರಮ ಮುಗಿಸಿ ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ಭರಮಪ್ಪ ಲೇಔಟ್ ನಲ್ಲಿ ದಾಳಿ ನಡೆದಿದ್ದು ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿ ಆರ್ ಎಸ್ಎಸ್ ಹಾಗೂ ಹಿಂದೂ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿದ್ದಾರೆ. ದಾಳಿಯಲ್ಲಿ ಪ್ರಕಾಶ್ ತಲೆಗೆ ಪೆಟ್ಟು ಬಿದ್ದಿದ್ದು, ಸದ್ಯಕ್ಕೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments