HomeKarnatakaಜ.14 ಮತ್ತು15ರಂದು ಸಿಗಂದೂರು ಚೌಡೇಶ್ವರಿ ಜಾತ್ರೆ: ಕೋವಿಡ್ ಬಳಿಕ ಈ ಬಾರಿ ಕಳೆಗಟ್ಟಿದ ಸಂಭ್ರಮ

ಜ.14 ಮತ್ತು15ರಂದು ಸಿಗಂದೂರು ಚೌಡೇಶ್ವರಿ ಜಾತ್ರೆ: ಕೋವಿಡ್ ಬಳಿಕ ಈ ಬಾರಿ ಕಳೆಗಟ್ಟಿದ ಸಂಭ್ರಮ

ಬ್ಯಾಕೋಡು (ಶಿವಮೊಗ್ಗ): ಜಿಲ್ಲೆಯ ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ದೇವಾಲಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜ.14 ಮತ್ತು 15ರಂದು ನಡೆಯುವ ಜಾತ್ರೆಗೆ ಸಕಲ ಸಿದ್ಧತೆ ನಡೆದಿದೆ.

ಕೋವಿಡ್ ಕಾರಣಗಳಿಂದ ಕಳೆದ ಎರಡು ವರ್ಷ ಜಾತ್ರೆಯನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ದೇವಿಯ ಜಾತ್ರೆ ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆಯುತ್ತಿದ್ದು, ನಾಡಿನೆಲ್ಲೆಡೆಯಿಂದ ದೇವಿಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಈಗಾಗಲೇ ದೇವಾಲಯಕ್ಕೆ ಸುಣ್ಣ ಬಣ್ಣ ಬಳಿದು, ತಳಿರು ತೋರಣ ಕಟ್ಟಿ ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದ್ದು ಭಕ್ತರ ಆಗಮನಕ್ಕೆ ವಿಶೇಷ ತಯಾರಿ ನಡೆಸಲಾಗಿದೆ.

ಚೌಡೇಶ್ವರಿ ದೇವಿ ಜಾತ್ರೆಗೆ ಬರುವ ಭಕ್ತರಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ರಾತ್ರಿ ಊಟ ಹಾಗೂ ಸಿಹಿ ತಿಂಡಿಗಳ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಭಕ್ತರು ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 300 ಮಂದಿ ಸ್ವಯಂ ಸೇವಕರು ಜಾತ್ರೆಯಲ್ಲಿ ಭಕ್ತಾದಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments