Karnataka

ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ: 3,920 ಶಾಲೆಗಳಲ್ಲಿ ಶೇ.100, 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ

ಬೆಂಗಳೂರು: ರಾಜ್ಯದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಕಳೆದ ಹತ್ತು ವರ್ಷಗಳಲ್ಲಿಯೇ ದಾಖಲೆಯ ಫಲಿತಾಂಶ ಈ ಬಾರಿ ಬಂದಿದೆ. 2021-22ನೇ ಶೈಕ್ಷಣಿಕ ಸಾಲಿನಲ್ಲಿ ಶೇಕಡಾ 90.29 ಬಾಲಕಿಯರು, ಶೇಕಡಾ 81.03 ಬಾಲಕರು ತೇರ್ಗಡೆ ಆಗಿದ್ದಾರೆ.

ಈ ಬಾರಿ ಗ್ರೇಡ್ ಅಂಕಗಳನ್ನು ನೀಡಲಾಗಿದ್ದು , A+ ಗ್ರೇಡ್ ನಲ್ಲಿ 1,18,875 ವಿದ್ಯಾರ್ಥಿಗಳು, A ಗ್ರೇಡ್ ನಲ್ಲಿ 1,82,60, B+ನಲ್ಲಿ 1,73,528, B ಗ್ರೇಡ್ ನಲ್ಲಿ 1,43,900 ಮಕ್ಕಳು ತೇರ್ಗಡೆ ಹೊಂದಿದ್ದಾರೆ. C+ನಲ್ಲಿ 87,801, C ಗ್ರೇಡ್ ನಲ್ಲಿ 14,627 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

91ರಿಂದ 100 ಅಂಕ ಪಡೆದವರಿಗೆ A+, 81ರಿಂದ 90 ಅಂಕ ಗಳಿಸಿದವರಿಗೆ A ಗ್ರೇಡ್, 71ರಿಂದ 80 ಅಂಕ ಗಳಿಸಿದ್ದರೆ B+, 61ರಿಂದ 60 ಅಂಕ ಗಳಿಸಿದವರಿಗೆ B ಗ್ರೇಡ್, 51ರಿಂದ 60 ಅಂಕ ಗಳಿಸಿದವರಿಗೆ C+ ಹಾಗೂ 35ರಿಂದ 50 ಅಂಕ ಗಳಿಸಿದವರಿಗೆ C ಗ್ರೇಡ್ ನೀಡಲಾಗಿದೆ.

ರಾಜ್ಯದ 1462 ಸರ್ಕಾರಿ ಶಾಲೆಗಳಲ್ಲಿ ಎಲ್ಲ ಮಕ್ಕಳೂ ತೇರ್ಗಡೆಯಾಗಿದ್ದಾರೆ. 467 ಅನುದಾನ ಶಾಲೆಗಳು, 1991 ಅನುದಾನ ರಹಿತ ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ, ಎರಡು ಸರ್ಕಾರಿ ಶಾಲೆಗಳು, ಮೂರು ಅನುದಾನಿತ ಮತ್ತು 15 ಅನುದಾನರಹಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

Exit mobile version