HomeKarnatakaವಿಕೃತ ಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆ ರದ್ದು ಮಾಡಿದ ಸುಪ್ರೀಂ ಕೋರ್ಟ್!

ವಿಕೃತ ಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆ ರದ್ದು ಮಾಡಿದ ಸುಪ್ರೀಂ ಕೋರ್ಟ್!

ಬೆಂಗಳೂರು: ವಿಕೃತ ಕಾಮಿ, ಸೀರಿಯಲ್ ಕಿಲ್ಲರ್ ಉಮೇಶ್‌ ರೆಡ್ಡಿಗೆ ವಿಧಿಸಿದ್ದ ಮರಣ ದಂಡನೆ (ಗಲ್ಲು) ಶಿಕ್ಷೆಯನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿ ಆದೇಶಿಸಿದೆ.

ವಿಕೃತ ಕಾಮಿ ಬಿಎ ಉಮೇಶ್ ಅಲಿಯಾಸ್ ಉಮೇಶ್ ರೆಡ್ಡಿಗೆ ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಮರಣದಂಡನೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಂ ಮೆಟ್ಟಿಲೇರಿದ್ದ. ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ನೇತೃತ್ವದ ತ್ರಿಸದಸ್ಯ ಪೀಠ ಗಲ್ಲು ಶಿಕ್ಷೆ ವಿಳಂಬ ಅಪರಾಧಿ ಯೋಗಕ್ಷೇಮದ ಮೇಲೆ ದುಷ್ಪರಿಣಾಮ ಬೀರಿದೆ ಎಂಬ ಅಂಶವನ್ನು ಉಲ್ಲೇಖಿಸಿ ಗಲ್ಲು ಶಿಕ್ಷೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಉಮೇಶ್ ರೆಡ್ಡಿ 4 ವರ್ಷಗಳ ಕಾಲ ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿದ್ದ. ನಂತರ ಪೊಲೀಸ್ ಇಲಾಖೆಗೆ ಸೇರಿದ್ದ ಆತನ ವಿರುದ್ಧ 18 ಕೊಲೆ, ಕನಿಷ್ಠ 20 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು 9 ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದಾನೆ. 1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ 2007ರಲ್ಲಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಇನ್ನು ಉಮೇಶ್ ರೆಡ್ಡಿಯನ್ನು ಬೆಳಗಾವಿ ಜೈಲಿನಲ್ಲಿ 10 ವರ್ಷಗಳ ಕಾಲ ಏಕಾಂಗಿಯಾಗಿ ಇರಿಸಲಾಗಿತ್ತು.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments