HomeKarnatakaಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡ್ ಸಮೂಹ ಬಿದ್ದು ತಾಯಿ, ಮಗು ಸಾವು

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡ್ ಸಮೂಹ ಬಿದ್ದು ತಾಯಿ, ಮಗು ಸಾವು

ಬೆಂಗಳೂರು: ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡ್ ಸಮೂಹ ಹಠಾತ್ ಕುಸಿದುಬಿದ್ದಿದ್ದು, ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ.

ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ತೇಜಸ್ವಿನಿ (35) ಹಾಗೂ ಆಕೆಯ ಪುತ್ರ ವಿಹಾನ್ (2 ವರ್ಷ 6 ತಿಂಗಳು) ಮೃತ ದುರ್ದೈವಿಗಳಾಗಿದ್ದಾರೆ. ಗಂಡ ಹೆಂಡತಿ ಹಾಗು ಅವಳಿ ಮಕ್ಕಳು ಬೈಕಿನಲ್ಲಿ ಪ್ರಯಾಣಿಸುತ್ತಿದ್ದು ಗಂಡ ಹಾಗು ಹೆಣ್ಣು ಮಗು ಅಪಾಯದಿಂದ ಪಾರಾಗಿದ್ದಾರೆ. ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು.

ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗು ಮೇಲೆ ಬಿದ್ದಿದೆ. ತಾಯಿ ಹಾಗೂ ಮಗುವಿಗೆ ಗಂಭೀರವಾದ ಗಾಯಗಳಾಗಿದ್ದ ಕಾರಣ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments