Movie

ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡದ ಕಂಪು: ಕನ್ನಡದ ‘ಡೊಳ್ಳು’ ಸಿನಿಮಾ ಪ್ರದರ್ಶನಕ್ಕೆ ಆಯ್ಕೆ

ಬೆಂಗಳೂರು: ನಿರ್ದೇಶಕ ಪವನ್ ಒಡೆಯರ್ ನಿರ್ಮಾಣದ ಕಾನಂದ ಸಿಎಂಮ ಡೊಳ್ಳು ಪ್ರತಿಷ್ಟಿತ ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿರುವ 9 ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಿದ್ಧಪಡಿಸಿರುವ ಪಟ್ಟಿಯಲ್ಲಿ ಒಟ್ಟು 9 ಭಾರತೀಯ ಸಿನೆಮಾಗಳನ್ನು ಆಯ್ಕೆ ಮಾಡಲಾಗಿದೆ. ಕನ್ನಡದಿಂದ ಆಯ್ಕೆಯಾದ ಡೊಳ್ಳು ಸಿನೆಮಾವನ್ನು ಸಾಗರ್ ಪುರಾಣಿಕ್ ಅವರು ನಿರ್ದೇಶಿಸಿದ್ದಾರೆ.

ವಿದೇಶದಲ್ಲಿ ಭಾರತವನ್ನು ಪ್ರತಿನಿಧಿಸುವ ಸಿನಿಮಾಗಳ ಸಾಲಲ್ಲಿ ಡೊಳ್ಳು ಸಿನಿಮಾವನ್ನು ಆಯ್ಕೆ ಮಾಡಿರುವುದು ತುಂಬಾ ಹೆಮ್ಮೆ ಅನಿಸುತ್ತದೆ ಎಂದು ನಿರ್ದೇಶಕ ಸಾಗರ್ ಪುರಾಣಿಕ್ ಖುಷಿ ವ್ಯಕ್ತಪಡಿಸಿದ್ದಾರೆ.

Exit mobile version