
ರೋರಿಂಗ್ ಸ್ಟಾರ್ ಶ್ರೀಮುರುಳಿ ನಾಯಕನಾಗಿ, ಕನ್ನಡದ ಕುವರಿ ಆಶಿಕಾ ರಂಗನಾಥ್ ನಾಯಕಿಯಾಗಿರುವ ‘ಮದಗಜ’ ಚಿತ್ರ ಇದೇ ಡಿಸೆಂಬರ್’ನಲ್ಲಿ ತೆರೆಗೆ ತರಲು ಚಿತ್ರತಂಡ ಸಿದ್ಧವಾಗಿದೆ.
ಎಲ್ಲ ಅಂದುಕೊಂಡಂತೆ ಆಗಿದ್ದರೆ ಆಗಸ್ಟ್ ತಿಂಗಳಲ್ಲೇ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಕೋರೋನ ಕಾರಣದಿಂದ ಎಲ್ಲವೂ ಅಂದುಕೊಂಡಂತೆ ಆಗಿಲ್ಲ ಎಂದು ಚಿತ್ರತಂಡ ಹೇಳಿಕೊಂಡಿದೆ. ಸದ್ಯಕ್ಕೆ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ತಿಂಗಳ ಅಂತ್ಯಕ್ಕೆ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ಚಿತ್ರದಲ್ಲಿ ತೆಲುಗು ನಟ ಜಗಪತಿ ಬಾಬು ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಆಶಿಕಾ ರಂಗನಾಥ್ ಮೊದಲ ಬಾರಿಗೆ ಶ್ರೀಮುರುಳಿ ಅವರಿಗೆ ಜೋಡಿಯಾಗುತ್ತಿದ್ದು ಚಿಕ್ಕಣ್ಣ, ರಂಗಾಯಣ ರಘು, ಶಿವರಾಜ್ ಕೆ.ಆರ್ ಪೇಟೆ ಮುಂತಾದವರ ತಾರಾಗಣವಿದೆ. ಚಿತ್ರವನ್ನು ಉಮಾಪತಿ ನಿರ್ಮಾಣ ಮಾಡುತ್ತಿದ್ದಾರೆ.
ಅಯೋಗ್ಯ ಚಿತ್ರ ನಿರ್ದೇಶಿಸಿದ್ದ ಮಹೇಶ್ ಕುಮಾರ್ ಮಾದಗಜಕ್ಕೆ ನಿರ್ದೇಶಕರು. ರವಿ ಬಸ್ರೂರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ನವೀನ ಕುಮಾರ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನವಿದೆ.
ಮದಗಜದ ನಂತರ ಶ್ರೀ ಮುರುಳಿ ಹೊಂಬಾಳೆ ಫಿಲಂಸ್ ಬ್ಯಾನರ್ ನ ಭಗೀರ ಚಿತ್ರಕ್ಕೆ ತಯಾರಾಗಲಿದ್ದಾರೆ. ಭಗೀರದ ಕತೆಯನ್ನು ಉಗ್ರಂ, ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಬರೆದಿದ್ದು ಡಾಕ್ಟರ್ ಸೂರಿ ಎಂಬವರು ನಿರ್ದೇಶನ ಮಾಡುತ್ತಿದ್ದಾರೆ.












































