National

ಬಿಗ್ ಬ್ರೇಕಿಂಗ್: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) 5 ವರ್ಷಗಳ ಕಾಲ ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ

ನವದೆಹಲಿ: ದೇಶವೇ ಖುಷಿ ಪಡುವ ವಿಚಾರವೊಂದನ್ನು ಕೇಂದ್ರ ಸರಕಾರ ಇಂದು ಪ್ರಕಟಿಸಿದ್ದು ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್’ಐ) ಸಂಘಟನೆಯನ್ನು ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ದೇಶದಾದ್ಯಂತ ಕಳೆದ ಕೆಲವು ದಿನಗಳಿಂದ ಸತತವಾಗಿ ನಡೆದ ಎನ್’ಐಎ ದಾಳಿಯ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಿ ಮಹತ್ವದ ನಿರ್ಧಾರ ಕೈಗೊಂಡಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗು ಅದರ ಅಂಗಸಂಸ್ಥೆಗಳನ್ನುಈ ಕೂಡಲೇ ಜಾರಿಗೆ ಬರುವಂತೆ ದೇಶದಾದ್ಯಂತ ಐದು ವರ್ಷಗಳ ಕಾಲ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಪಿಎಫ್ಐ ಜತೆಗೆ ಅಂಗಸಂಸ್ಥೆಗಳಾದ ನ್ಯಾಷನಲ್ ಕಾನ್ಫೆಡರೇಷನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್, ನ್ಯಾಷನಲ್ ವುಮೆನ್ಸ್ ಫ್ರಂಟ್ ಕೂಡ ಕಾನೂನುಬಾಹಿರ ಸಂಸ್ಥೆ, ಜ್ಯೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಷನ್ ಬ್ಯಾನ್, ರಿಹಾಬ್ ಫೌಂಡೇಷನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಅನ್ನು ಕೂಡ 5 ವರ್ಷಗಳ ಕಾಲ ಬ್ಯಾನ್ ಮಾಡಲಾಗಿದೆ.

Exit mobile version