
ನವದೆಹಲಿ: ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಹೊರಟ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಗೆ ಅನುಮತಿ ನಿರಾಕರಿಸಿದ ಬಳಿಕ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ವಿವಿಗೆ ಭದ್ರತೆ ಹೆಚ್ಚಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿವಿಯ ನಾಲ್ವರು ವಿದ್ಯಾರ್ಥಿ ಪ್ರಮುಖರನ್ನು ಬಂಧಿಸಲಾಗಿದೆ.
ಕ್ಯಾಂಪಸ್ ನಲ್ಲಿ ಮೋದಿ ಕುರಿತ ಕುತಂತ್ರದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡುವುದಿಲ್ಲ ಮತ್ತು ವಿಶ್ವವಿದ್ಯಾಲಯದ ಶಾಂತಿಯುತ ಶೈಕ್ಷಣಿಕ ವಾತಾವರಣವನ್ನು ಹಾಳುಮಾಡಲು ಪಟ್ಟಭದ್ರ ಹಿತಾಸಕ್ತಿಗಳನ್ನು ತಡೆಯಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಜಾಮಿಯಾ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಹೇಳಿಕೆ ನೀಡಿದೆ.
ಇಂದು ಸಂಜೆ 6 ಗಂಟೆಗೆ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಅಣಿ ಮಾಡಿಕೊಳ್ಳಲಾಗಿತ್ತು. ಆದರೆ ಪ್ರದರ್ಶನಕ್ಕೆ ಕೆಲವೇ ಗಂಟೆಗಳ ಮೊದಲು ನಾಲ್ವರು ಎಸ್‌ಎಫ್‌ಐ ಸದಸ್ಯರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಬಂಧನದ ವಿರುದ್ಧ ಎಸ್‌ಎಫ್‌ಐ ಸಂಜೆ ಪ್ರತಿಭಟನೆಗೆ ಕರೆ ನೀಡಿದೆ. ವಿವಿಯ ಗೇಟ್ ಮುಂಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL