National

ಗುಜರಾತ್ ಮೊರ್ಬಿ ಸೇತುವೆ ಕುಸಿತ ಸಾವಿನ ಸಂಖ್ಯೆ 141ಕ್ಕೆ ಏರಿಕೆ: 150 ಜನ ಸಾಮರ್ಥ್ಯದ ಸೇತುವೆ ಪ್ರವೇಶಿಸಲು 650 ಮಂದಿಗೆ ಟಿಕೆಟ್!

ಅಹಮದಾಬಾದ್: ಗುಜರಾತ್‌ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿತದಿಂದ ಉಂಟಾದ ಸಾವಿನ ಸಂಖ್ಯೆ ಏರಿಕೆ ಕಾಣುತ್ತಿದ್ದು ಇದೀಗ ಸಾವಿನ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಜನರಿಗಾಗಿ ಶೋಧ ನಡೆಯುತ್ತಿದೆ. ಇತ್ತೀಚಿಗೆ ಈ ಸೇತುವೆಯನ್ನು ದುರಸ್ತಿ ಮಾಡಿದ್ದು ಕಳಪೆ ಕಾಮಗಾರಿ ಬಗ್ಗೆ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಕಾರ ಇರುವ ಕರ್ನಾಟಕದಂತೆ ಇಲ್ಲೂ 40 ಪರ್ಸೆಂಟ್ ಕಮಿಷನ್ ದಂಧೆ ಇದೆಯೇ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಮತ್ತೊಂದು ಆಘಾತಕಾರಿ ಅಂಶ ಬೆಳಕಿಗೆ ಬಂದಿದ್ದು ಸೇತುವೆ ಒಮ್ಮೆಗೆ ಕೇವಲ 150-200 ಜನರ ಭಾರ ಹೊರುವ ಸಾಮರ್ಥ್ಯ ಹೊಂದಿದ್ದರೂ ಬರೋಬ್ಬರಿ 650 ಮಂದಿಗೆ ಟಿಕೆಟ್ ನೀಡಿರುವುದು ತಿಳಿದು ಬಂದಿದೆ. 17 ರೂ. ಕೊಟ್ಟು ಪಡೆದ ಪಾಸ್ ಅನೇಕರಿಗೆ ಸಾವಿನ ಟಿಕೆಟ್ ಆಗಿ ಪರಿಣಮಿಸಿದೆ.

15 ವರ್ಷಗಳ ಕಾಲ ಸೇತುವೆಯ ನಿರ್ವಹಣೆ ಮತ್ತು ಉಸ್ತುವಾರಿ ವಹಿಸಿಕೊಂಡ ಒರೆವಾ ಕಂಪನಿಯು ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಶತಮಾನದಷ್ಟು ಹಳೆಯದಾದ, ಕೇವಲ 150 ರಿಂದ 200 ಜನ ಸಾಮರ್ಥ್ಯದ ಸೇತುವೆ ಪ್ರವೇಶಿಸಲು ಬರೋಬ್ಬರಿ 650 ಜನರಿಗೆ ಟಿಕೆಟ್ ನೀಡಲಾಗಿದ್ದು, ಇದು ದುರಂತಕ್ಕೆ ಕಾರಣವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

Exit mobile version