HomeNationalಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ತಾಲಿಬ್ ಹುಸೇನ್ ಬಂಧನ: ಸ್ಥಳೀಯ ಲಿಂಕ್ ಬಗ್ಗೆ ತನಿಖೆ ಜೋರು

ಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ತಾಲಿಬ್ ಹುಸೇನ್ ಬಂಧನ: ಸ್ಥಳೀಯ ಲಿಂಕ್ ಬಗ್ಗೆ ತನಿಖೆ ಜೋರು

ಬೆಂಗಳೂರು: ಕರ್ನಾಟಕ ಹಾಗು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಶಂಕಿತ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬೆಂಗಳೂರಿನ ಶ್ರೀರಾಂಪುರದಲ್ಲಿ ಬಂಧಿಸಲಾಗಿದೆ. ಆರೋಪಿ ತಾಲಿಬ್ ಹುಸೇನ್’ನನ್ನು ಜೂನ್ 5 ರಂದು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಡವಾಗಿ ಮಂಗಳವಾರ ತಿಳಿಸಿವೆ.

ಪೊಲೀಸ್ ಮೂಲಗಳ ಪ್ರಕಾರ, ಸೇನಾ ಪಡೆಗಳು ಕಾಶ್ಮೀರದಲ್ಲಿ ಹುಸೈನ್ ಹುಡುಕಾಟವನ್ನು ತೀವ್ರಗೊಳಿಸಿದ್ದರಿಂದ ಹುಸೇನ್ ತನ್ನ ಪೋಲೀಸ್ ಹೆಂಡತಿ ಮತ್ತು ಮೂವರು ಮಕ್ಕಳೊಂದಿಗೆ ಜಮ್ಮು ಮತ್ತು ಕಾಶ್ಮೀರದಿಂದ ಪಲಾಯನ ಮಾಡಿ ಬೆಂಗಳೂರಿನಲ್ಲಿ ಅಡಗಿಕೊಂಡಿದ್ದ. ಬೆಂಗಳೂರಿಗೆ ಬಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ ಈತನನ್ನು ಬೆಂಗಳೂರು ಪೊಲೀಸರ ಸಹಾಯದೊಂದಿಗೆ ಸಿಆರ್​ಪಿಎಫ್ ಯೋಧರು ಬಂಧಿಸಿದ್ದಾರೆ.

38 ವರ್ಷದ ಉಗ್ರ ತಾಲಿಬ್ ಹುಸೇನ್ ಬೆಂಗಳೂರಿನಲ್ಲಿ ತಾರಿಕ್ ಎಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ. ಈತ ಬಿಎನ್ಎಲ್ ಏರ್ ಸರ್ವಿಸ್ ನಲ್ಲಿ ಕೆಲಸ ಮಾಡುತ್ತಿದ್ದು ಕಾಶ್ಮೀರದಿಂದ ಬೆಂಗಳೂರಿಗೆ ಓಡಿಬಂದಿದ್ದನು. ಉಗ್ರ ತಾಲಿಬ್ ಹುಸೇನ್ ಗೆ ಓಕಳಿಪುರಂ ಮಸೀದಿ ಮುಖ್ಯಸ್ಥ ಅನ್ವರ್ ಪಾಷಾ ಆಶ್ರಯ ನೀಡಿದ್ದ. ಅಲ್ಲಿನ ಮಸೀದಿಯಲ್ಲಿ ಹುಸೈನ್ ಪಾಠ ಪ್ರವಚನ ಮಾಡುತ್ತಿದ್ದ ಶಂಕೆಯೂ ವ್ಯಕ್ತವಾಗಿದೆ. ಈತನ ಸ್ಥಳೀಯ ಲಿಂಕ್ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments