National

ಸಾವಿನ ಸನಿಹದಲ್ಲಿ ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್: ಬಹು ಅಂಗಾಂಗ ವೈಫಲ್ಯದಿಂದ ಬಳಲಿಕೆ

ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು ಅವರ ಕುಟುಂಬವು ಸಾಮಾಜಿಕ ಮಾಧ್ಯಮದಲ್ಲಿ “ಪರ್ವೇಜ್ ಅವರು ಚೇತರಿಸಿಕೊಳ್ಳಲು ಸಾಧ್ಯವಾಗದ ಕಠಿಣ ಹಂತಕ್ಕೆ ಹೋಗುತ್ತಿದ್ದಾರೆ” ಎಂದು ತಿಳಿಸಿದೆ.

ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥರೂ ಆಗಿದ್ದ ಮುಷರಫ್ ನಿಧನದ ಬಗ್ಗೆ ವರದಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಅವರ ಅಂಗಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅವರು ಸತ್ತಿಲ್ಲ ಎಂದು ಅವರ ಕುಟುಂಬ ಸ್ಪಷ್ಟಪಡಿಸಿದೆ.

“ಅವರು ವೆಂಟಿಲೇಟರ್‌ನಲ್ಲಿದ್ದಾರೆ. ಕಳೆದ 3 ವಾರಗಳಿಂದ ಅವರ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ಸಾಧ್ಯವಾಗದ ಕಠಿಣ ಹಂತಕ್ಕೆ ಆರೋಗ್ಯ ಸ್ಥಿತಿ ತಲುಪಿದ್ದು ಮತ್ತು ಅಂಗಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ” ಎಂದು ಪರ್ವೇಜ್ ಮುಷರಫ್ ಕುಟುಂಬ ಹೇಳಿಕೆಯಲ್ಲಿ ಹೇಳಿದೆ.

ಮುಷರಫ್ ಅವರನ್ನು ಪಾಕಿಸ್ತಾನದಲ್ಲಿ ದೇಶದ್ರೋಹದ ವಿಚಾರಣೆಗೆ ಒಳಪಡಿಸಿ ಅಪರಾಧಿ ಎಂದು ಘೋಷಿಸಲಾಗಿತ್ತು ಮತ್ತು 2020 ರಲ್ಲಿ ದೇಶದ್ರೋಹಕ್ಕಾಗಿ ಮರಣದಂಡನೆ ವಿಧಿಸುವಂತೆ ಸೂಚಿಸಲಾಗಿತ್ತು. ಆದರೆ ಮುಷರಫ್ 2016 ರಿಂದ ದುಬೈನಲ್ಲಿ ವಾಸಿಸುತ್ತಿದ್ದು ಪಾಕಿಸ್ತಾನಕ್ಕೆ ಹಿಂತಿರುಗುವ ಧೈರ್ಯ ಮಾಡಿಲ್ಲ.

Exit mobile version