National

ಭಾರತದ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆ: ಕೇಂದ್ರದಿಂದ ತಂಡ ರವಾನೆ

ತಿರುವನಂತಪುರಂ: ವಿಶ್ವದಾದ್ಯಂತ ಹಲವು ತಿಂಗಳಿಂದ ಸುದ್ದಿ ಮಾಡಿದ್ದ ಮಂಕಿಪಾಕ್ಸ್ ಪ್ರಕರಣ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಯುಎಇಯಿಂದ ಹಿಂದಿರುಗಿದ ಕೇರಳ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಪಾಸಿಟಿವ್ ಆಗಿರೋದು ದೃಢಪಟ್ಟಿದೆ. ಈ ಮೂಲಕ ಭಾರತದ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ.

ಕೊಲ್ಲಮ್ ಜಿಲ್ಲೆಯ 35 ವರ್ಷದ ಮಂಕಿಫಾಕ್ಸ್ ರೋಗಿಯು ಜುಲೈ 12 ರಂದು ದುಬೈನಿಂದ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದು ಅವರು ಸ್ಥಿರವಾಗಿದ್ದಾರೆ ಎಂದು ಕೇರಳ ಅರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಈತ ವಿಮಾನದಲ್ಲಿ ತನ್ನ ದೇಹವನ್ನು ಕವರ್ ಮಾಡಿಕೊಂಡು ಬಂದಿದ್ದ ಎನ್ನಲಾಗಿದೆ. ಆತನ ಜತೆ ವಿಮಾನದಲ್ಲಿ ಸಮೀಪದಲ್ಲಿ ಪ್ರಯಾಣಿಸಿದ 11 ಮಂದಿ ಪ್ರಯಾಣಿಕರು, ಆಟೋ ಹಾಗು ಕ್ಯಾಬ್ ಡ್ರೈವರ್ಸ್, ಪ್ರಾಥಮಿಕ ಚಿಕಿತ್ಸೆ ನೀಡಿದ್ದ ಸ್ಥಳೀಯ ವೈದ್ಯರು ಹಾಗು ದಾದಿಯರು ಸೇರಿ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ.

ಮಂಕಿಫಾಕ್ಸ್ ರೋಗ ಉಲ್ಬಣಗೊಳ್ಳಲು 21 ದಿನಗಳು ಬೇಕಾಗುತ್ತದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಸಹಾಯ ಮಾಡಲು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ (ಎನ್‌ಸಿಡಿಸಿ) ತಜ್ಞರ ತಂಡವನ್ನು ಕಳುಹಿಸಿದೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

Exit mobile version