National

ಕಾಂಗ್ರೆಸ್ಸಿಗೆ ಕೈಕೊಟ್ಟು ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆಗೆ ಕಪಿಲ್ ಸಿಬಲ್ ಸ್ಪರ್ಧೆ

ಲಖನೌ: ಕಾಂಗ್ರೆಸ್ ನಲ್ಲಿ ಹೈಕಮಾಂಡ್ ವಿರುದ್ಧ ಅಸಮಾಧಾನ ಮತ್ತಷ್ಟು ತಾರಕಕ್ಕೆ ಏರಿದ್ದು ಪಕ್ಷದ ವಿರುದ್ಧ ಬಂಡಾಯ ಘೋಷಿಸಿದ್ದ ಜಿ-23 ಮುಖಂಡರಲ್ಲಿ ಒಬ್ಬರಾಗಿರುವ ಕಪಿಲ್‌ ಸಿಬಲ್‌ ಅವರು, ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಕಪಿಲ್ ಸಿಬಲ್ ಅವರು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರೊಂದಿಗೆ ಮಾತುಕತೆ ನಬಳಿಕ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಾನು ಮೇ ೧೬ ರಂದೇ ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ್ದೆ ಎಂದು ಸಿಬಲ್ ಹೇಳಿದ್ದಾರೆ.

ನಾನು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ನಾನು ಮೊದಲಿನಿಂದಲೂ ಸ್ವತಂತ್ರ ಧ್ವನಿಯಾಗಲು ಬಯಸುತ್ತಿದ್ದೆ ಎಂದು ತಿಳಿಸಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭ ಅಖಿಲೇಶ್ ಯಾದವ್, ಸಂಸದ ರಾಮ್ ಗೋಪಾಲ್ ಯಾದವ್ ಮುಂತಾದವರು ಹಾಜರಿದ್ದರು.

Exit mobile version