National

ರಂಜಾನ್ ದಿನ ಭದ್ರತಾ ಪಡೆಗಳ ಮೇಲೆ ಮಸೀದಿಯಿಂದ ಕಲ್ಲು ತೂರಾಟ: ಕಾಶ್ಮೀರಿ ಮುಸ್ಲಿಮರಿಂದ ಸದಾ ಭಾರತ ವಿರೋಧಿ ಧೋರಣೆ

ಕಾಶ್ಮೀರ: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಮಸೀದಿಯೊಂದರಲ್ಲಿ ಮುಂಜಾನೆ ರಂಜಾನ್ ಪ್ರಾರ್ಥನೆಯ ಬಳಿಕ ಕಲ್ಲು ತೂರಾಟದ ಘಟನೆ ವರದಿಯಾಗಿದೆ. ಪ್ರಾರ್ಥನೆಯ ಬಳಿಕ ಮುಸ್ಲಿಂ ಯುವಕರು ಮಸೀದಿ ಹೊರಗಿದ್ದ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಸ್ವತಂತ್ರ ಕಾಶ್ಮೀರ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಈ ಮೂಲಕ ಕಾಶ್ಮೀರಿ ಮುಸ್ಲಿಮರು ಸದಾ ಭಾರತ ವಿರೋಧಿ ಧೋರಣೆಯನ್ನೇ ಹೊಂದಿರುತ್ತಾರೆ ಅನ್ನುವುದನ್ನು ಹೊರ ಜಗತ್ತಿಗೆ ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ.

ದೇಶದ ಭದ್ರತಾ ಪಡೆಗಳ ಮೇಲೆ ಅನೇಕ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸುತ್ತಿರುವ ಘಟನೆಯ ವಿಡಿಯೋ ಈಗ ಹೊರಬಿದ್ದಿದ್ದು ಬೆಚ್ಚಿ ಬೀಳಿಸುವಂತಿದೆ. ಮೂಲಗಳ ಪ್ರಕಾರ, ಈದ್-ಉಲ್-ಫಿತರ್ ಸಂದರ್ಭದಲ್ಲಿ ಪ್ರಾರ್ಥನೆಯ ಸಮಯದಲ್ಲಿ, ಕೆಲವು ಕಿಡಿಗೇಡಿಗಳು ‘ಸ್ವತಂತ್ರ ಕಾಶ್ಮೀರ’ ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಭದ್ರತಾ ಪಡೆಗಳು ಮಧ್ಯಪ್ರವೇಶಿಸುತ್ತಿದ್ದಂತೆ, ದುಷ್ಕರ್ಮಿಗಳು ಅವರ ಮೇಲೆ ಕಲ್ಲುಗಳನ್ನು ಎಸೆಯಲು ಪ್ರಾರಂಭಿಸಿದರು.

ಈಗ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Exit mobile version