HomeNationalಜಮ್ಮು ಕಾಶ್ಮೀರ: ಸರ್ಕಾರಿ ಕಚೇರಿಯಲ್ಲಿ ಕಾಶ್ಮೀರಿ ಪಂಡಿತನ ಮೇಲೆ ಗುಂಡು ಹಾರಿಸಿ ಕೊಂದ ಉಗ್ರರು

ಜಮ್ಮು ಕಾಶ್ಮೀರ: ಸರ್ಕಾರಿ ಕಚೇರಿಯಲ್ಲಿ ಕಾಶ್ಮೀರಿ ಪಂಡಿತನ ಮೇಲೆ ಗುಂಡು ಹಾರಿಸಿ ಕೊಂದ ಉಗ್ರರು

ಶ್ರೀನಗರ: ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ಸರ್ಕಾರಿ ನೌಕರನನ್ನು ಗುರುವಾರ (ಮೇ 12) ಕೇಂದ್ರ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿನ ಅವರು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹಿಂದೂ ಕಾಶ್ಮೀರಿ ಪಂಡಿತ ಉದ್ಯೋಗಿ ರಾಹುಲ್ ಭಟ್ ಅವರು ಕಂದಾಯ ಇಲಾಖೆಯಡಿಯಲ್ಲಿ ಚಾದೂರ ಪ್ರದೇಶದ ತಹಸೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು.

ರಾಹುಲ್ ಭಟ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಚೇರಿ ಆವರಣದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಭಟ್ ಅವರನ್ನು ಚಿಕಿತ್ಸೆಗಾಗಿ ಶ್ರೀನಗರ ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟರಲ್ಲಿ ಅವರು ಸಾವನ್ನಪ್ಪಿದರು. ಪ್ರಾಥಮಿಕ ತನಿಖೆಯಿಂದ 2 ಉಗ್ರರು ಈ ಉಗ್ರ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಏತನ್ಮಧ್ಯೆ, ದಾಳಿಕೋರರನ್ನು ಹಿಡಿಯಲು ಭದ್ರತಾ ಪಡೆಗಳು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments