National

ಅಕ್ರಮ ಹಣ ವರ್ಗಾವಣೆ ಆರೋಪಿ ಮಹಾ ಸಚಿವ ನವಾಬ್ ಮಲಿಕ್ ಅನಾರೋಗ್ಯದ ಕಾರಣ ನೀಡಿ ಆಸ್ಪತ್ರೆಗೆ ದಾಖಲು

ಮುಂಬೈ: ದಾವೂದ್ ಇಬ್ರಾಹಿಂ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ಎನ್ಸಿಪಿ ನೇತಾರ ನವಾಬ್ ಮಲಿಕ್ ಆರೋಗ್ಯ ಹದಗೆಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮಲಿಕ್ ಅವರ ವಕೀಲರು ಹೇಳಿದ್ದಾರೆ.

ಇಲ್ಲಿನ ಆರ್ಥರ್ ರೋಡ್ ಜೈಲಿನಲ್ಲಿ ಬಂಧನದಲ್ಲಿರುವ ನವಾಬ್ ಮಲಿಕ್ ಜ್ವರ ಮತ್ತು ಅತಿಸಾರದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವಿಶೇಷ ನ್ಯಾಯಾಲಯ ಮಲಿಕ್ ವಕೀಲರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ನವಾಬ್ ಮಲಿಕ್ ವಕೀಲರು ವೈದ್ಯಕೀಯ ಕಾರಣಕ್ಕಾಗಿ ಮಧ್ಯಂತರ ಜಾಮೀನು ನೀಡುವಂತೆ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಮೂರು ದಿನಗಳಿಂದ ನವಾಬ್ ಮಲಿಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಈಗ ದಾಖಲಾಗಿರುವ ಆಸ್ಪತ್ರೆಯಲ್ಲಿ ಹೆಚ್ಚಿನ ಸೌಲಭ್ಯಗಳು ಇಲ್ಲ ಹಾಗಾಗಿ ಸುಧಾರಿತ ಆಸ್ಪತ್ರೆಗೆ ವರ್ಗಾವಣೆ ಮಾಡುವಂತೆ ವಕೀಲರು ಕೋರಿದ್ದಾರೆ. ವಿಶೇಷ ನ್ಯಾಯಾಧೀಶ ಆರ್ ಎನ್ ರೋಕಡೆ ಅವರು, ಮಲಿಕ್ ಆರೋಗ್ಯದ ಬಗ್ಗೆ ವರದಿ ನೀಡುವಂತೆ ಆಸ್ಪತ್ರೆಗೆ ಸೂಚಿಸಿ ಪ್ರಕರಣದ ವಿಚಾರಣೆಯನ್ನು ಮೇ 5ಕ್ಕೆ ಮುಂದೂಡಿದ್ದಾರೆ.

Exit mobile version