HomeNationalಯಾವುದೇ ಮುಸ್ಲಿಂ ಮಹಿಳೆ ತನ್ನ ಪತಿ ಮೂವರು ಹೆಂಡತಿಯರನ್ನು ಮನೆಗೆ ಕರೆತರಲು ಬಯಸುವುದಿಲ್ಲ: ಯೂನಿಫಾರಂ ಸಿವಿಲ್...

ಯಾವುದೇ ಮುಸ್ಲಿಂ ಮಹಿಳೆ ತನ್ನ ಪತಿ ಮೂವರು ಹೆಂಡತಿಯರನ್ನು ಮನೆಗೆ ಕರೆತರಲು ಬಯಸುವುದಿಲ್ಲ: ಯೂನಿಫಾರಂ ಸಿವಿಲ್ ಕೋಡ್ ಅನಿವಾರ್ಯ ಎಂದ ಅಸ್ಸಾಂ ಸಿಎಂ

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಬೆಂಬಲಿಸಿ ಮಾತನಾಡಿ ಪ್ರತಿಯೊಬ್ಬ ಮುಸ್ಲಿಂ ಮಹಿಳೆ ಅದನ್ನು ಜಾರಿಗೊಳಿಸಬೇಕೆಂದು ಬಯಸುತ್ತಾರೆ ಎಂದು ಹೇಳಿದರು.

“ಯಾವುದೇ ಮುಸ್ಲಿಂ ಮಹಿಳೆ ತನ್ನ ಗಂಡ ಇತರ ಮೂರು ಮಂದಿ ಹೆಂಡತಿಯರನ್ನು ಮನೆಗೆ ಕರೆತರಲು ಬಯಸುವುದಿಲ್ಲ. ಯಾವುದೇ ಮುಸ್ಲಿಂ ಮಹಿಳೆಯನ್ನು ಕೇಳಿ. ಯುಸಿಸಿ ನನ್ನ ವಿಷಯವಲ್ಲ, ಇದು ಎಲ್ಲಾ ಮುಸ್ಲಿಂ ಮಹಿಳೆಯರಿಗೆ ಸಮಸ್ಯೆಯಾಗಿದೆ” ಎಂದು ಶರ್ಮಾ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆಯ ಕರಡು ರಚನೆಗೆ ಸಮಿತಿಯನ್ನು ರಚಿಸಲಾಗುವುದು ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದ ಬಳಿಕ ಯುಸಿಸಿ ಕುರಿತ ಚರ್ಚೆ ಮತ್ತೆ ಆರಂಭವಾಗಿದೆ. ಉತ್ತರ ಪ್ರದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯ ಅರ್ಹತೆಗಳನ್ನು ವಿವರಿಸಲು ಚೌಪಲ್‌ಗಳನ್ನು ಸ್ಥಾಪಿಸಲಾಗುವುದು ಎಂದು ಮುಸ್ಲಿಂ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಹೇಳಿದ್ದರು.

ಏತನ್ಮಧ್ಯೆ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ “ಅಸಂವಿಧಾನಿಕ ಮತ್ತು ಅಲ್ಪಸಂಖ್ಯಾತರ ವಿರೋಧಿ ನಡೆ” ಎಂದು ಹೇಳಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments