HomeNationalನಾಳೆ ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ: 4000 ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ

ನಾಳೆ ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ: 4000 ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ

ನವದೆಹಲಿ: ಪ್ರಧಾನಿ ನರೇಂದ ಮೋದಿ ನಾಳೆಯಿಂದ ಎರಡು ದಿನಗಳ ಕಾಲ ಆಂಧ್ರಪ್ರದೇಶ, ಕೇರಳ ಪ್ರವಾಸ ಕೈಗೊಳ್ಳಲಿದ್ದಾರೆ. ಕೊಚ್ಚಿಯಲ್ಲಿ ಪ್ರಧಾನಿ ಮೋದಿ ಹೊಸ ಡ್ರೈ ಡಾಕ್ ಹಾಗೂ ಅಂತಾರಾಷ್ಟ್ರೀಯ ಹಡಗು ದುರಸ್ತಿ  ಕೇಂದ್ರದ ಉದ್ಘಾಟನೆ ಸೇರಿ ಒಟ್ಟು 4,000 ಕೋಟಿ ರೂಪಾಯಿ ವೆಚ್ಚದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಮೊದಲಿಗೆ ನಾಳೆ ಆಂಧ್ರಪ್ರದೇಶದ ಸತ್ಯ ಸಾಯಿ ಜಿಲ್ಲೆಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು,  ಕಸ್ಟಮ್ಸ್, ಪರೋಕ್ಷ ತೆರಿಗೆಗಳು ಮತ್ತು ಮಾದಕ ವಸ್ತುಗಳ ರಾಷ್ಟ್ರೀಯ ಅಕಾಡೆಮಿಯ ಹೊಸ ಕ್ಯಾಂಪಸ್ ಅನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಬಳಿಕ ಕೇರಳಕ್ಕೆ ತೆರಳಲಿದ್ದಾರೆ.

ಜನವರಿ 17 ರಂದು ಕೇರಳದ ಗುರುವಾಯೂರ್ ದೇವಸ್ಥಾನ ಮತ್ತು ತ್ರಿಪ್ರಯಾರ್ ಶ್ರೀ ರಾಮಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿರುವ ನರೇಂದ್ರ ಮೋದಿಯವರು ನಂತರ ಕೇರಳದ ಬಂದರುಗಳು, ಹಡಗು ಮತ್ತು ಜಲಮಾರ್ಗ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

RELATED ARTICLES

ಪ್ರಮುಖ ಸುದ್ದಿಗಳು

Recent Comments