
ಅಬುದಾಭಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರದಿಂದ (feb 13) ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಎರಡು ದಿನಗಳ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಹಾಗು ಅಬುಧಾಬಿಯಲ್ಲಿ ಭವ್ಯ ರೀತಿಯಲ್ಲಿ ನಿರ್ಮಾಣವಾದ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ.
ಮೋದಿ ಅಧಿಕಾರಕ್ಕೆ ಬಂದ ಬಳಿಕ 2015 ರಿಂದ ಯುಎಇಗೆ ಇದು ಏಳನೇ ಭೇಟಿಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶನಿವಾರ ತಿಳಿಸಿದೆ. ಮೋದಿ ಮತ್ತು ಅಲ್ ನಹ್ಯಾನ್ ಅವರು ಉಭಯ ದೇಶಗಳ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಇನ್ನಷ್ಟು ಆಳಗೊಳಿಸಲು, ವಿಸ್ತರಿಸಲು ಮತ್ತು ಬಲಪಡಿಸಲು ಮತ್ತು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಮಾರ್ಗಗಳನ್ನು ಚರ್ಚಿಸಲಿದ್ದಾರೆ ಎಂದು ಎಂಇಎ ಹೇಳಿದೆ.
ಈ ಸಂದರ್ಭ ಅಬುಧಾಬಿಯ ಮೊದಲ ಹಿಂದೂ ದೇವಾಲಯವಾದ BAPS ಮಂದಿರವನ್ನು ಮೋದಿ ಉದ್ಘಾಟಿಸಲಿದ್ದಾರೆ. ಬಳಿಕ ಅವರು ಜಾಯೆದ್ ಸ್ಪೋರ್ಟ್ಸ್ ಸಿಟಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯುಎಇಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿಕೊಂಡಿದೆ.
ನಮ್ಮ ವಾಟ್ಸಾಪ್ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
https://chat.whatsapp.com/CMUDdTXoFVn7atm3zHYGrd


