HomeNationalಉ.ಪ್ರ 59 ಕ್ಷೇತ್ರ, ಪಂಜಾಬ್ ರಾಜ್ಯದ 117 ಕ್ಷೇತ್ರಗಳಲ್ಲಿ ಇಂದು ಮತದಾನ

ಉ.ಪ್ರ 59 ಕ್ಷೇತ್ರ, ಪಂಜಾಬ್ ರಾಜ್ಯದ 117 ಕ್ಷೇತ್ರಗಳಲ್ಲಿ ಇಂದು ಮತದಾನ

ಲಕ್ನೊ ಮತ್ತು ಚಂಡೀಗಢ: ಪಂಜಾಬ್ ರಾಜ್ಯದ 117 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಹಾಗು ಉತ್ತರ ಪ್ರದೇಶ ವಿಧಾನಸಭೆಗೆ 59 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು ಮತದಾನ ಬಿರುಸುಗೊಂಡಿದೆ.

ಉತ್ತರ ಪ್ರದೇಶದ 16 ಜಿಲ್ಲೆಗಳ 59 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ನಡೆಯುತ್ತಿದ್ದು ಒಟ್ಟು 627 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೂರನೇ ಹಂತದ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸ್ಪರ್ಧಿಸುತ್ತಿರುವ ಕರ್ಹಲ್ ಕ್ಷೇತ್ರ, ಅಖಿಲೇಶ್ ಯಾದವ್ ಮಾವ ಪ್ರಗತಿಶೀಲ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಶಿವಪಾಲ್ ಸಿಂಗ್ ಯಾದವ್ ಜಸ್ವಂತ್ ನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಪಂಜಾಬ್ ವಿಧಾನಸಭೆಗೆ ಒಂದೇ ಹಂತದಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ. ಒಟ್ಟು 117 ಕ್ಷೇತ್ರಗಳಳ್ಳಿ 1304 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಬಾರಿ ಆಮ್ ಆದ್ಮಿ, ಕಾಂಗ್ರೆಸ್, ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments