National

ಗರ್ಭಗುಡಿ ಪ್ರವೇಶಿಸಿದ ರಾಮಲಲ್ಲಾ ವಿಗ್ರಹ – ಇಂದು ಮೂರ್ತಿ ಪ್ರತಿಷ್ಠಾಪನೆ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ವಿಧಿವಿಧಾನಗಳು ನಡೆಯುತ್ತಿದ್ದು ಇಂದು ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ತರಲಾಗಿದೆ.150-200 ಕೆಜಿ ತೂಕದ ವಿಗ್ರಹವನ್ನು ಕ್ರೇನ್ ಸಹಾಯದಿಂದ ಒಳಗೆ ತರುವ ಮುನ್ನ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಮೆರವಣಿಗೆ ಮೂಲಕ ರಾಮಲಲ್ಲಾನ ವಿಗ್ರಹವನ್ನು ಬುಧವಾರ ಸಂಜೆ ಅಯೋಧ್ಯೆ ದೇವಸ್ಥಾನಕ್ಕೆ ತರಲಾಗಿತ್ತು. ಅದನ್ನು ಗರ್ಭಗುಡಿಯಲ್ಲಿ ಇರಿಸಲು ಕ್ರೇನ್ ಬಳಸಿ ಮೇಲೆತ್ತಲಾಯಿತು.ಈ ಮೂರ್ತಿಯನ್ನು ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕಪ್ಪು ಕಲ್ಲಿನಲ್ಲಿ ಕೆತ್ತಿದ್ದಾರೆ. ಭುಧವಾರ ಸಂಜೆ ರಾಮಲಲ್ಲಾ ಅವರ ವಿಗ್ರಹವನ್ನು ಗುಲಾಬಿ ಮತ್ತು ಚೆಂಡು ಹೂಗಳಿಂದ ಅಲಂಕರಿಸಲಾಗಿತ್ತು.

ಬುಧವಾರ ಸಂಜೆ ರಾಮಮಂದಿರದ ಆವರಣದಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರದಕ್ಷಿಣೆ ಹಾಕಲಾಯಿತು. ಜನವರಿ 22 ರ ಕಾರ್ಯಕ್ರಮದ ಪೂರ್ವಭಾವಿಯಾಗಿ ಆಚರಣೆಯ ಅಂಗವಾಗಿ ‘ಕಲಶ ಪೂಜೆ’ ನಡೆಯಿತು.

Exit mobile version