HomeNationalಮಹಾ ಸಿಎಂ ಆಗಿ ಬಂಡಾಯ ನಾಯಕ ಶಿಂಧೆ ಪ್ರಮಾಣ, ಉಪ ಮುಖ್ಯಮಂತ್ರಿಯಾಗಿ ಸರ್ಕಾರ ಸೇರಿಕೊಂಡ ಫಡ್ನವಿಸ್

ಮಹಾ ಸಿಎಂ ಆಗಿ ಬಂಡಾಯ ನಾಯಕ ಶಿಂಧೆ ಪ್ರಮಾಣ, ಉಪ ಮುಖ್ಯಮಂತ್ರಿಯಾಗಿ ಸರ್ಕಾರ ಸೇರಿಕೊಂಡ ಫಡ್ನವಿಸ್

ಮುಂಬಯಿ: ಕ್ಷಣ ಕ್ಷಣವೂ ರೋಚಕ ತಿರುವು ಕೊಡುತ್ತಾ ಸಾಗಿದ ಮಹಾರಾಷ್ಟ್ರ ರಾಜಕಾರಣ ಕೊನೆಗೆ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದರೊಂದಿಗೆ ಮುಕ್ತಾಯಗೊಂಡಿದೆ. ಇಂದು ಸಂಜೆ ನಡೆದ ಸರಳ ಸಮಾರಂಭದಲ್ಲಿ ಶಿಂಧೆ ಪ್ರಮಾಣವಚನ ಸ್ವೀಕರಿಸಿದರು. ಸರಕಾರದಿಂದ ದೂರ ಉಳಿಯುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಕೊನೆ ಕ್ಷಣದಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಏಕನಾಥ್ ಶಿಂಧೆ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಪ್ರಧಾನಿ ಮೋದಿ ಹಾಗು ಗೃಹ ಸಚಿವ ಅಮಿತ್ ಷಾ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಹಾಗು ಉಪಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments