
ನವದೆಹಲಿ: ಶಿವಸೇನೆ ಮುಖಂಡ, ಸಂಸದ ಸಂಜಯ್ ರಾವತ್ ಅವರನ್ನು ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.
ಸಂಜಯ್ ರಾವತ್ ನಿವಾಸದ ಮೇಲೆ ದಾಳಿ ನಡೆಸಿ ವಿಚಾರಣೆ ನಡೆಸಿ ಗಂಟೆಗಳ ನಂತರ ಇಡಿ ಅವರನ್ನು ಬಂಧಿಸಿದೆ. ಏಪ್ರಿಲ್‍ನಲ್ಲಿ, ಜಾರಿ ನಿರ್ದೇಶನಾಲಯವು ತನ್ನ ತನಿಖೆಯ ಭಾಗವಾಗಿ ರಾವತ್ ಅವರ ಪತ್ನಿ ವರ್ಷಾ ರಾವತ್ ಮತ್ತು ಅವರ ಇಬ್ಬರು ಸಹಚರರ 11.15 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. 1,034 ಕೋಟಿ ರೂ.ಗಳ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಈ ಹಿಂದೆ ಎರಡು ಬಾರಿ ವಿಚಾರಣೆ ನಡೆಸಲಾಗಿತ್ತು.
ಸಂಜಯ್ ಬಂಧನದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ರಾವತ್ ನಿವಾಸದ ಎದುರು ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.