HomeNationalಗುಜರಾತ್ ಸರ್ಕಾರಕ್ಕೆ ಹಿನ್ನಡೆ: ಬಿಲ್ಕಿಸ್ ಬಾನು ಅಪರಾಧಿಗಳ ಬಿಡುಗಡೆ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್

ಗುಜರಾತ್ ಸರ್ಕಾರಕ್ಕೆ ಹಿನ್ನಡೆ: ಬಿಲ್ಕಿಸ್ ಬಾನು ಅಪರಾಧಿಗಳ ಬಿಡುಗಡೆ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಗೋದ್ರೋತ್ತರ ಗಲಭೆಯ ಸಂದರ್ಭ ನಡೆದ ಬಿಲ್ಕಿಸ್‌ ಬಾನೋ ಅತ್ಯಾಚಾರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಸನ್ನಡತೆ ಆಧಾರದಲ್ಲಿ ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಶಿಕ್ಷೆಯ ಅವಧಿ ಮುಗಿಯುವ ಮುನ್ನವೇ ಬಿಡುಗಡೆ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹಾಗಾಗಿ ಸನ್ನಡತೆ ಆಧಾರದಲ್ಲಿ ಬಿಡುಗಡೆಯಾಗಿರುವ 11 ಅತ್ಯಾಚಾರಿಗಳು ಮತ್ತೆ ಜೈಲು ಸೇರಬೇಕಾದ ಸ್ಥಿತಿ ಎದುರಾಗಿದೆ.

ಗುಜರಾತ್ ಸರ್ಕಾರದ ಕ್ರಮ ಪ್ರಶ್ನಿಸಿ ಬಿಲ್ಕಿಸ್‌ ಬಾನೋ ವಕೀಲರು ಮತ್ತು ಹಲವು ಸಾರ್ವಜನಿಕ ಹಿಸಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ।ಬಿ.ವಿ.ನಾಗರತ್ನ ಮತ್ತು ನ್ಯಾ।ಉಜ್ಜಲ್‌ ಭುಯಾನ್‌ ಅವರಿದ್ದ ಪೀಠ ತೀರ್ಪು ನೀಡಿದೆ.

ಬಿಲ್ಕಿಸ್ ಪ್ರಕರಣದ ವಿಚಾರಣೆ ಮಹಾರಾಷ್ಟ್ರದಲ್ಲಿ ನಡೆದಿರುವ ಕಾರಣ ಅಪರಾಧಿಗಳಿಗೆ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡುವ ಅಧಿಕಾರ ಮಹಾರಾಷ್ಟ್ರ ಸರ್ಕಾರಕ್ಕೆ ಮಾತ್ರವೇ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಪರಾಧಿಗಳನ್ನು ಬಿಡುಗಡೆ ಮಾಡುವ ಮೊದಲು ನ್ಯಾಯಾಲಯದ ಅನುಮತಿ ಪಡೆಯಬೇಕಿತ್ತು. ಘಟನೆ ನಡೆದಿರುವುದು ಹಾಗೂ ಅಪರಾಧಿಗಳು ಶಿಕ್ಷೆ ಅನುಭವಿಸಿರುವುದು ಗುಜರಾತ್‌ನಲ್ಲಿ ಸರಿ. ಆದರೆ ಪ್ರಕರಣದ ವಿಚಾರಣೆ ನಡೆದಿರುವುದು ಮಹಾರಾಷ್ಟ್ರದಲ್ಲಿ. ಅಪರಾಧ ಎಲ್ಲಿ ನಡೆಯಿತು, ಶಿಕ್ಷೆ ಎಲ್ಲಿ ಆಗಿದೆ ಅನ್ನೋದಕ್ಕಿಂತ ವಿಚಾರಣೆ ನಡೆದ ರಾಜ್ಯಗಳೇ ಮುಖ್ಯ. ಅಪರಾಧ ಸಂಭವಿಸಿದ ರಾಜ್ಯ ಕ್ಷಮಾಧಾನ, ಅವಧಿಪೂರ್ವ ಬಿಡುಗಡೆ ಮಾಡುವ ಸಂಪೂರ್ಣ ಅಧಿಕಾರ ಹೊಂದಿಲ್ಲ. ಹೀಗಾಗಿ ಗುಜರಾತ್ ಸರ್ಕಾರದ ಆದೇಶ ರದ್ದುಗೊಳಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

RELATED ARTICLES

ಪ್ರಮುಖ ಸುದ್ದಿಗಳು

Recent Comments