HomeNationalಗುಜರಾತ್ ಗಲಭೆ ಸಂಬಂಧ ನಕಲಿ ಸಾಕ್ಷ್ಯಾಧಾರ ಸೃಷ್ಟಿ ಆರೋಪ: ತೀಸ್ತಾ ಸೆಟಲ್ವಾಡ್'ಗೆ 14 ದಿನಗಳ ನ್ಯಾಯಾಂಗ...

ಗುಜರಾತ್ ಗಲಭೆ ಸಂಬಂಧ ನಕಲಿ ಸಾಕ್ಷ್ಯಾಧಾರ ಸೃಷ್ಟಿ ಆರೋಪ: ತೀಸ್ತಾ ಸೆಟಲ್ವಾಡ್’ಗೆ 14 ದಿನಗಳ ನ್ಯಾಯಾಂಗ ಬಂಧನ

ಅಹಮದಾಬಾದ್: 2002ರ ವಿವಾದಿತ ಗುಜರಾತ್ ಗಲಭೆ ಪ್ರಕರಣಗಳಿಗೆ ಸಂಬಂಧಿಸಿ ನಕಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿತ ‘ಸೊ ಕಾಲ್ಡ್’ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್ ಬಿ ಶ್ರೀಕುಮಾರ್ ಸ್ಥಳೀಯ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಶನಿವಾರ ಈ ಇಬ್ಬರನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್ ಪಿ ಪಟೇಲ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಹೆಚ್ಚಿನ ಕಸ್ಟಡಿಗೆ ಮನವಿ ಮಾಡಿಲ್ಲ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪಟೇಲ್ ಹೇಳಿದ್ದಾರೆ.

2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರಿಗೆ ವಿಶೇಷ ತನಿಖಾ ತಂಡ ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಕ್ರೈಂ ಬ್ರಾಂಚ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

ಗುಜರಾತ್ ಗಲಭೆ ಪ್ರಕರಣಗಳಲ್ಲಿ ನಿರಪರಾಧಿಗಳನ್ನು ಹಾಗು ಅಮಾಯಕರನ್ನು ಬಂಧಿಸುವ ಕಾರಣಕ್ಕಾಗಿ ಶ್ರೀಕುಮಾರ್, ಸೆಟಲ್ವಾಡ್ ಮತ್ತು ಸಂಜೀವ್ ಭಟ್ ಅವರು ನಕಲಿ ಸಾಕ್ಷ್ಯಾಧಾರಗಳ ಸೃಷ್ಟಿ ಮಾಡುವ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments