HomeNationalಮೋದಿ ಹತ್ಯೆಗೆ ಸಂಚು; ಉಗ್ರಗಾಮಿ ಸಂಘಟನೆ ಪಿಎಫ್ಐ ಜತೆಗೆ ನಂಟು: ಮಾಜಿ ಪೊಲೀಸ್ ಅಧಿಕಾರಿ ಸೇರಿ...

ಮೋದಿ ಹತ್ಯೆಗೆ ಸಂಚು; ಉಗ್ರಗಾಮಿ ಸಂಘಟನೆ ಪಿಎಫ್ಐ ಜತೆಗೆ ನಂಟು: ಮಾಜಿ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಅರೆಸ್ಟ್

ಪಾಟ್ನಾ/ಬಿಹಾರ: ಪ್ರಧಾನಿ ಮೋದಿ ಹತ್ಯೆಗೆ ಉಗ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಜೊತೆ ಸೇರಿ ಸಂಚು ರೂಪಿಸಿದ್ದ ಆರೋಪದಡಿ ಜಾರ್ಖಂಡ್ ನ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲಾವುದ್ದೀನ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಭಯೋತ್ಪಾದಕ ಘಟಕವನ್ನು ಭೇದಿಸಿಸಿರುವ ಬಿಹಾರ ಪೊಲೀಸರು ಬುಧವಾರ ತಡರಾತ್ರಿ ಪಾಟ್ನಾದ ಫುಲ್ವಾರಿ ಷರೀಫ್ ಪ್ರದೇಶದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಜಾರ್ಖಂಡ್ ನ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲಾವುದ್ದೀನ್ ಮತ್ತು ಅಥರ್ ಪರ್ವೇಜ್ ಎಂದು ಗುರುತಿಸಲಾಗಿದೆ. ಅವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ಯೊಂದಿಗೆ ಸಂಪರ್ಕ ಹೊಂದಿದ್ದರು.

ಮಾಜಿ ಪೊಲೀಸ್ ಅಧಿಕಾರಿ ಜಲಾವುದ್ದೀನ್ ಈ ಹಿಂದೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ(ಸಿಮಿ)ದೊಂದಿಗೆ ಸಂಬಂಧ ಹೊಂದಿದ್ದ. ಸಿಮಿ ನಿಷೇಧದ ಬಳಿಕ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಗಿ ಬದಲಾಗಿದ್ದ ಸಂಘಟನೆಗೆ ಸೇರಿದ್ದ. 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಪಿಎಫ್ಐ ಯೋಜಿಸುತ್ತಿದೆ ಮತ್ತು ಜುಲೈ 12ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸುವ ಸಂಚು ಕೂಡ ಇತ್ತು ಎಂಬ ಸ್ಪೋಟಕ ಅಂಶ ತನಿಖೆಯಿಂದ ಬಯಲಾಗಿದೆ. ಈ ಇಬ್ಬರು ಸ್ಥಳೀಯ ಮುಸ್ಲಿಮರಿಗೆ ಕತ್ತಿ ಮತ್ತು ಚಾಕುಗಳನ್ನು ಬಳಸುವುದನ್ನು ಕಲಿಸುತ್ತಿದ್ದರು ಮತ್ತು ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments