National

ಉತ್ತರ ಪ್ರದೇಶ: ಇಲ್ಲಿವರೆಗೆ ಮಸೀದಿಗಳಿಂದ 46 ಸಾವಿರ ಧ್ವನಿವರ್ಧಕಗಳ ತೆರವು

ಲಕ್ನೋ: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಆದೇಶದಂತೆ ಮಸೀದಿಗಳಿಂದ ಇಲ್ಲಿಯವರೆಗೆ ಸುಮಾರು 46,000 ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ.

ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತಿದ್ದು ಯಾವುದೇ ತಾರತಮ್ಯವಿಲ್ಲದೆ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲಾಗುತ್ತಿದೆ. ಏಪ್ರಿಲ್ 25 ರಿಂದ ಆರಂಭವಾದ ಈ ಕಾರ್ಯಾಚರಣೆಯಲ್ಲಿ ಒಟ್ಟು 45, 733 ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ. ಶನಿವಾರ ಬೆಳಗ್ಗೆಯವರೆಗೂ 58,861 ಧ್ವನಿವರ್ಧಕಗಳ ಡೆಸಿಬಲ್ ಮಿತಿಯನ್ನು ಕಡಿಮೆಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಹೇಳಿದ್ದಾರೆ.

ಸರ್ಕಾರದ ಆದೇಶ ಅನ್ವಯ ಉತ್ತರ ಪ್ರದೇಶ ರಾಜ್ಯಾದ್ಯಂತ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲಾಗುತ್ತಿದ್ದು, ಇಕಾರ್ಯಾಚರಣೆ ಸಾಗುತ್ತಿದೆ. ಈ ನಿರ್ಧಾರವನ್ನು ಸುಪ್ರೀಂ ಕೋರ್ಟಿನ ಸೂಚನೆಯ ಹಿನ್ನಲೆಯಲ್ಲಿ ತೆಗೆದುಕೊಳ್ಳಲಾಗಿದೆ.

Exit mobile version