HomeNationalಜ್ಞಾನವಾಪಿ: ಸಮೀಕ್ಷೆ ನಡೆಸದಂತೆ ತಡೆ ಕೋರಿ ಮಸೀದಿ ಸಲ್ಲಿಸಿದ್ದ ಅರ್ಜಿ ವಜಾ

ಜ್ಞಾನವಾಪಿ: ಸಮೀಕ್ಷೆ ನಡೆಸದಂತೆ ತಡೆ ಕೋರಿ ಮಸೀದಿ ಸಲ್ಲಿಸಿದ್ದ ಅರ್ಜಿ ವಜಾ

ವಾರಣಾಸಿ: ಜ್ಞಾನವ್ಯಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವೈಜ್ಞಾನಿಕ ಸಮೀಕ್ಷೆಗೆ ತಡೆ ನೀಡುವಂತೆ ಕೋರಿ ಮಸೀದಿ ಆಡಳಿತ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ಕೋರ್ಟ್ ಇಂದು ಶುಕ್ರವಾರ ವಜಾಗೊಳಿಸಿದೆ. ಈ ಮೂಲಕ ಮಸೀದಿಗೆ ಹಿನ್ನಡೆ ಆದಂತಾಗಿದೆ.

ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಜಿಲ್ಲಾ ಸರ್ಕಾರಿ ವಕೀಲ ರಾಜೇಶ್ ಮಿಶ್ರಾ ಅವರು, ಸಮೀಕ್ಷೆಗೆ ಈಗಾಗಲೇ ಅಲಹಾಬಾದ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಒಪ್ಪಿಗೆ ಸಿಕ್ಕಿದೆ ಎಂದು ಕೋರ್ಟ್ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ಅವರು, ನ್ಯಾಯಾಲಯ ಈ ವಿಚಾರದಲ್ಲಿ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.

17ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಇಲ್ಲಿನ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments