
ಸಿಲಿಗುರಿ: ಈ ಹಿಂದೆ ದೇಶದಾದ್ಯಂತ ಮುಸ್ಲಿಂ ಸಮುದಾಯದಿಂದ ಹಿಂಸೆ, ಪ್ರತಿಭಟನೆಗಳಿಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಮತ್ತೆ ಮುನ್ನೆಲೆಗೆ ಬಂದಿದ್ದು ಕೋವಿಡ್ ಅಲೆ ಮುಗಿದ ಬಳಿಕ ಸಿಎಎ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಪಶ್ಚಿಮ ಬಂಗಾಳದಲ್ಲಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಮಾತನಾಡಿದ ಅಮಿತ್ ಷಾ, ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೊಸ ಪೌರತ್ವ ಕಾನೂನನ್ನು ಜಾರಿಗೊಳಿಸುವುದಿಲ್ಲ ಎಂದು ವದಂತಿಗಳನ್ನು ಹರಡುತ್ತಿದ್ದಾರೆ. ಪೌರತ್ವ ಕಾನೂನು ಕೇಂದ್ರದ ಕಾರ್ಯಸೂಚಿಯಲ್ಲಿ ಮರಳಲಿದೆ ಎಂದು ಸ್ಪಷ್ಟಪಡಿಸಿದರು. ಮಮತಾ ಅವರು ಒಳನುಸುಳುವಿಕೆ ಮುಂದುವರೆಯುವದನ್ನು ಬಯಸುತ್ತಿದ್ದಾರೆ ಎಂದು ಈ ಸಂದರ್ಭ ಷಾ ಆರೋಪಿಸಿದರು.
ಷಾ ಮಾತಿಗೆ ತಿರುಗೇಟು ನೀಡಿರುವ ಮಮತಾ ಬ್ಯಾನರ್ಜಿ, ಬಿಜೆಪಿಯವರು ಸಂಸತ್ತಿನಲ್ಲಿ ಏಕೆ ಮಸೂದೆಯನ್ನು ತರುತ್ತಿಲ್ಲ? ಅವರು 2024 ರಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಅವರು ಒಂದು ವರ್ಷದ ನಂತರ ಇಲ್ಲಿಗೆ ಬಂದಿದ್ದಾರೆ. ಇಲ್ಲಿಗೆ ಬಂದಾಗಲೆಲ್ಲಾ ಅವರು ಅಸಭ್ಯವಾಗಿ ಮಾತನಾಡುತ್ತಾರೆ” ಎಂದು ಲೇವಡಿ ಮಾಡಿದರು.