Political

ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮರಳಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ನವದೆಹಲಿ: ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಿದ್ದಾರೆ.

ಮರಳಿ ಬಿಜೆಪಿಗೆ ಬರಬೇಕು ಅನ್ನೋದು ಪಕ್ಷದ ಎಲ್ಲರ ಆಶಯವಾಗಿತ್ತು. ಇಂದು ಬೆಳಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಹಿರಿಯ ನಾಯಕರನ್ನು ನನ್ನನ್ನು ಪ್ರೀತಿಯಿಂದ ಬರಮಾಡಿಕೊಂಡರು. ಕಾಂಗ್ರೆಸ್ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರಿಗೆ ಕಳುಹಿಸಿದ್ದೇನೆ. ದೇಶದ ರಕ್ಷಣೆ, ದೇಶದ ಒಗ್ಗಡೂವಿಕೆಗಾಗಿ 10 ವರ್ಷದಿಂದ ಪ್ರಧಾನಿಗಳಾದ ಮೋದಿ ಕೆಲಸ ಮಾಡಿದ್ದಾರೆ. ಅವರ ಮರು ಆಯ್ಕೆಯಾಗಬೇಕು. ಈ ಹಿನ್ನೆಲೆ ಕಾಂಗ್ರೆಸ್ ತೊರೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಅದೇ ರೀತಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಇ-ಮೇಲ್ ಮೂಲಕ ಕಳುಹಿಸಿದ್ದೇನೆ. ನೇರವಾಗಿ ಪತ್ರ ಕಳುಹಿಸಲಾಗುತ್ತದೆ ಎಂದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಾನು ಮರಳಿ ಬರಬೇಕು ಅನ್ನೋದು ಅವರ ಆಶಯ ಆಗಿತ್ತು. ಹಾಗಾಗಿ ಬಿಜೆಪಿಗೆ ಮರಳಿ ಬಂದಿದ್ದೇನೆ.

ಜಗದೀಶ್ ಶೆಟ್ಟರ್ ಅವರು ಪುನಃ ಬಿಜೆಪಿಗೆ ಬರಬೇಕು ಅನ್ನೋದು ಭಾರತೀಯ ಜನತಾ ಪಕ್ಷದ ಅಪಾರ ಅಭಿಮಾನಿಗಳ ಅಭಿಲಾಷೆಯಾಗಿತ್ತು. ಅವರು ಬಿಜೆಪಿಗೆ ಪುನಃ ಬಂದರೆ ಪಕ್ಷಕ್ಕೆ ಬಲತುಂಬಿದಂತಾಗುತ್ತದೆ ಎಂದು ಅಭಿಮಾನಿಗಳು ಅಪೇಕ್ಷೆ ವ್ಯಕ್ತಪಡಿಸಿದ್ದರು ಎಂದು ವಿಜಯೇಂದ್ರ ಹೇಳಿದರು.

Exit mobile version