
ಬೆಂಗಳೂರು: ಅತೀ ಮಹತ್ವದ ಪ್ರವಾಸಿ ಇಂಗ್ಲೆಂಡ್ ಎದುರು 5 ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಟೂರ್ನಿಯ ಫೈನಲ್ ಪ್ರವೇಶಿಸಲು ಭಾರತ ತಂಡಕ್ಕೆ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಆದರೆ ಈ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಸೇವೆಯನ್ನು ಕಳೆದುಕೊಳ್ಳುವಂತಾಗಿದೆ.
ಪುನಶ್ಚೇತನ ಶಿಬಿರದಲ್ಲಿರುವ ಮೊಹಮ್ಮದ್ ಶಮಿ, ಜನವರಿ 25ರಂದು ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡೂ ಪಂದ್ಯಗಳಲ್ಲಿ ಆಡುವುದು ಅನುಮಾನವಾಗಿದೆ .ಅವರು ತಮ್ಮ ಪಾದದ ಗಾಯದ ನಂತರ ಬೌಲಿಂಗ್ ಅನ್ನು ಪುನರಾರಂಭಿಸಿಲ್ಲ. ಟೆಸ್ಟ್ ಸರಣಿಯಲ್ಲಿ ಶಮಿ ಭಾಗವಹಿಸುವಿಕೆಯು ಅವರ ಚಿಕಿತ್ಸೆಯ ನಂತರದ ಚೇತರಿಕೆಯ ಮೇಲೆ ನಿಂತಿದೆ. ಅದಕ್ಕಾಗಿ ಶಮಿ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಬೇಕಾಗುತ್ತದೆ.












































