HomeSportsಧೋನಿ ನಾಯಕತ್ವದಡಿ ಆಡಿದ್ದು 'ನನ್ನ ಅದೃಷ್ಟ': ಫಾಫ್ ಡು ಪ್ಲೆಸಿಸ್

ಧೋನಿ ನಾಯಕತ್ವದಡಿ ಆಡಿದ್ದು ‘ನನ್ನ ಅದೃಷ್ಟ’: ಫಾಫ್ ಡು ಪ್ಲೆಸಿಸ್

ಬೆಂಗಳೂರು: ಭಾರತದ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಅಡಿಯಲ್ಲಿ ಆಡುವುದಕ್ಕೆ ನಾನು ಅದೃಷ್ಟ ಮಾಡಿದ್ದೆ ಎಂದು ಜೋಬರ್ಗ್ ಸೂಪರ್ ಕಿಂಗ್ಸ್ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಸಂತಸ ವ್ಯಕ್ತಪಡಿಸಿದ್ದಾರೆ. ಐಪಿಲ್’ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಆಡಿದ್ದರಿಂದ ನನ್ನಲ್ಲಿ ನಾಯಕತ್ವದ ಗುಣಗಳು ಹೆಚ್ಚಾಗಿದೆ ಎಂದು ಧೋನಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

2011ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಸಿಎಸ್ ಕೆ ತಂಡ ಸೇರಿದ ಫಾಫ್ ಡುಪ್ಲೆಸಿಸ್, 2021ರವರೆಗೂ ತಂಡದ ಪ್ರಮುಖ ಆಟಗಾರರಾಗಿದ್ದರು. ಕೇವಲ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನದಿಂದ ಅಲ್ಲದೆ ಸೋಲುವ ಎಷ್ಟೋ ಪಂದ್ಯಗಳಲ್ಲಿ ಫಿನಿಷರ್ ಪಾತ್ರ ವಹಿಸಿದ್ದರು. 2021ರ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ 59 ಎಸೆತಗಳಲ್ಲಿ 86 ರನ್ ಗಳಿಸಿದ್ದಲ್ಲದೆ ಸಿಎಸ್ ಕೆ 4ನೇ ಬಾರಿ ಟ್ರೋಫಿ ಗೆದ್ದು ಕೊಟ್ಟು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದರು.

ಎಂ.ಎಸ್.ಧೋನಿಯೊಂದಿಗೆ ಡ್ರೆಸಿಂಗ್ ರೂಮ್ ಹಂಚಿಕೊಂಡಿದ್ದು ಸಂತಸವಾಗಿತ್ತು ಎಂದು ಹೇಳಿದ ಡುಪ್ಲೆಸಿಸ್ ಮಹೇಂದ್ರ ಸಿಂಗ್ ಧೋನಿ ಹಾಗೂ ಹೆಡ್ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರ ಆಟವನ್ನು ನೋಡಿದ್ದೇನೆ ಎಂದು ಹೇಳಿದರು.

RELATED ARTICLES

ಪ್ರಮುಖ ಸುದ್ದಿಗಳು

Recent Comments