HomeTrending Newsಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಡ್ರಮ್‌ನಲ್ಲಿ ಯುವತಿಯ ಶವ ಪತ್ತೆ: ಬೆಚ್ಚಿ ಬಿತ್ತು ಬೆಂಗಳೂರು

ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಡ್ರಮ್‌ನಲ್ಲಿ ಯುವತಿಯ ಶವ ಪತ್ತೆ: ಬೆಚ್ಚಿ ಬಿತ್ತು ಬೆಂಗಳೂರು

ಬೆಂಗಳೂರು: ಬೆಂಗಳೂರಿನ ಯಶವಂತಪುರ ರೈಲ್ವೇ ನಿಲ್ದಾಣದ ಆವರಣದಲ್ಲಿ ಪ್ಲಾಸ್ಟಿಕ್‌ ಡ್ರಮ್‌ ಒಂದರಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದ್ದು, ರೈಲು ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ.

ರೈಲ್ವೇ ನಿಲ್ದಾಣದ ರೈಲು ಹಳಿ ಬಳಿಯ ಗೋಡೆಯ ಪಕ್ಕ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ತುಂಬಾ ದಿನಗಳ ಹಿಂದೆಯೇ ಇದನ್ನು ಇಲ್ಲಿ ಇಡಲಾಗಿತ್ತು ಮತ್ತು ಇಂದು ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಸಿಬ್ಬಂದಿ ಅದನ್ನು ತೆರವುಗೊಳಿಸುವ ವೇಳೆ ಡ್ರಮ್ ನಲ್ಲಿ ಮಹಿಳೆ ಶವ ಇರುವುದು ಪತ್ತೆಯಾಗಿದೆ. ಕೊಲೆ ಮಾಡಿ ಶವವನ್ನು ಒಳಗೆ ಇಟ್ಟು ಬಾಕ್ಸ್ ಮೇಲೆ ಬಟ್ಟೆಗಳನ್ನು ಸುತ್ತಿ ದುಷ್ಕರ್ಮಿಗಳು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಶವ ಗಮನಿಸಿದಾಗ ಅಂದಾಜು 23 ವರ್ಷದ ಯುವತಿ ಎಂದು ಗುರುತಿಸಲಾಗಿದೆ. ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಯುವತಿಯನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಕವರ್ ನಲ್ಲಿ ಸೀಲ್ ಮಾಡಿಟ್ಟಿದ್ದರು. ಇಂದು ದುರ್ವಾಸನೆ ಹರಡಿದಾಗ ಡ್ರಮ್ ತೆಗೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸದ್ಯ ಯುವತಿಯ ಗುರುತು ಪತ್ತೆ ಹಚ್ಚುತ್ತಿರುವ ಯಶವಂತಪುರ ರೈಲ್ವೇ ಪೊಲೀಸರು, ಯಶವಂತಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲು ನಿಲ್ದಾಣದ ಸಿಸಿಟಿವಿ ಫೂಟೇಜುಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತ ಯುವತಿಯ ಗುರುತು ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ.

ಶವದ ಕುತ್ತಿಗೆಯಲ್ಲಿ ಬಿಳಿ ಬಣ್ಣದ ದುಪ್ಪಟ್ಟದಿಂದ ಗಂಟು ಬಿಗಿದಿರುವುದು ಪತ್ತೆಯಾಗಿದೆ. ಶವ ಕೊಳೆಯುವಂತೆ ಕೆಮಿಕಲ್ ಡ್ರಮ್ ನಲ್ಲಿ ದುಷ್ಕರ್ಮಿಗಳು ಹಾಕಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಯುವತಿ ಶವ ಪತ್ತೆಯಾಗುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದಾರೆ. ದಿನದ 24 ಗಂಟೆ ವೇಳೆಯೂ ರೈಲಿಗಾಗಿ ನಿಲ್ದಾಣದಲ್ಲಿ ಕಾಯುತ್ತಾ ಕುಳಿತುಕೊಳ್ಳುವವರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ.

ಸುದ್ದಿಯನ್ನು ನೇರವಾಗಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಗುಂಪು ಸೇರಿರಿ:
https://chat.whatsapp.com/DI9IChQqUYvJCGBVIqBvwL

RELATED ARTICLES

LEAVE A REPLY

Please enter your comment!
Please enter your name here

ಪ್ರಮುಖ ಸುದ್ದಿಗಳು

Recent Comments